ADVERTISEMENT

ಪರಿಷತ್‌ ಸದಸ್ಯತ್ವ ತೊರೆದ ಬೆನ್ನಲ್ಲೇ ಕಾಂಗ್ರೆಸ್‌ ಸೇರ್ಪಡೆಯಾದ ತೇಜಸ್ವಿನಿಗೌಡ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ಮಾರ್ಚ್ 2024, 6:55 IST
Last Updated 30 ಮಾರ್ಚ್ 2024, 6:55 IST
<div class="paragraphs"><p>ತೇಜಸ್ವಿನಿಗೌಡ</p></div>

ತೇಜಸ್ವಿನಿಗೌಡ

   

ಬೆಂಗಳೂರು: ವಿಧಾನಪರಿಷತ್‌ನ ಮಾಜಿ ಬಿಜೆಪಿ ಸದಸ್ಯೆ ತೇಜಸ್ವಿನಿಗೌಡ ಅವರು ಇಂದು (ಶನಿವಾರ) ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.

ದೆಹಲಿ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಅವರ ಸಮ್ಮುಖದಲ್ಲಿ ತೇಜಸ್ವಿನಿ ಕಾಂಗ್ರೆಸ್‌ಗೆ ಸೇರಿದ್ದಾರೆ.

ADVERTISEMENT

ತೇಜಸ್ವಿನಿಗೌಡ ಅವರು ಪರಿಷತ್‌ನ ಸದಸ್ಯತ್ವಕ್ಕೆ ಬುಧವಾರ ರಾಜೀನಾಮೆ ನೀಡಿದ್ದರು. ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು ರಾಜೀನಾಮೆಯನ್ನು ಅಂಗೀಕರಿಸಿದ್ದರು.

ರಾಜೀನಾಮೆ ಕುರಿತು ಮಾತನಾಡಿದ್ದ ಬಸವರಾಜ ಹೊರಟ್ಟಿ, ‘ತೇಜಸ್ವಿನಿ ಅವರ ಅವಧಿ ಜೂನ್‌ವರೆಗೆ ಇದ್ದು, ಅವರ ಮನವೊಲಿಕೆಗೆ ಸಾಕಷ್ಟು ಪ್ರಯತ್ನಿಸಿದೆ. ವೈಯಕ್ತಿಕ ಕಾರಣಗಳಿಗಾಗಿ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದರು. ರಾಜೀನಾಮೆಯನ್ನು ಅಂಗೀಕರಿಸಿದ್ದೇನೆ’ ಎಂದಿದ್ದರು.

ತೇಜಸ್ವಿನಿಯವರು ಮೈಸೂರು–ಕೊಡಗು ಕ್ಷೇತ್ರದ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಇದಕ್ಕಾಗಿ ಪ್ರಯತ್ನ ನಡೆಸಿದ್ದರು. ಪ್ರಯತ್ನ ಫಲನೀಡದೇ ಇರುವುದಕ್ಕೆ, ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್‌ ಕಡೆ ಮುಖ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.