ಕಲಬುರಗಿ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಲಕ್ಷ್ಮಣ ಸವದಿ ಅವರಿಗೆ ಪಕ್ಷ ಎಲ್ಲವನ್ನೂ ಕೊಟ್ಟ ಮೇಲೂ ಬಿಟ್ಟು ಹೋಗಿದ್ದಾರೆ. ಮುಂದೆ ಅನುಭವಿಸುತ್ತಾರೆ ಎಂದು ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಕ್ಷ್ಮಣ ಸವದಿ ಅವರನ್ನು ಸೋತ ನಂತರವೂ ಉಪಮುಖ್ಯಮಂತ್ರಿ ಮಾಡಲಾಗಿತ್ತು. ಜಗದೀಶ ಶೆಟ್ಟರ್ ಅವರಿಗೆ ಮುಖ್ಯಮಂತ್ರಿಯನ್ನಾಗಿ ಮಾಡಿದೆ. ಇಷ್ಟು ಮಾಡಿದ ಮೇಲೂ ಪಕ್ಷವನ್ನು ಬಿಟ್ಟು ಹೋಗುವ ಮುನ್ನ ಚಿಂತನೆ ಮಾಡಬೇಕಿತ್ತು ಎಂದರು.
ಪಕ್ಷದ ಕಾರ್ಯಕರ್ತರಿಗೂ ಸ್ಥಾನಮಾನ ಸಿಗಬೇಕು. ಬಿಜೆಪಿ ಕಾರ್ಯಕರ್ತರಿಗೆ ಅವಕಾಶವನ್ನು ಒದಗಿಸಿಕೊಡುತ್ತದೆ.
ಇಬ್ಬರು ಮುಂದಿನ ದಿನಗಳಲ್ಲಿ ಅತ್ಯವಶ್ಯವಾಗಿ ತುಂಬಾ ಪಶ್ಚಾತ್ತಾಪವನ್ನು ಪಡುತ್ತಾರೆ.
ಬಿಜೆಪಿ ಪಕ್ಷದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಕೆಲಸ ಮಾಡುವುದು ತುಂಬಾ ಗೌರವದ ಮಾತಾಗಿದೆ. ಆದರೂ ಅದರಿಂದ ದೂರ ಹೋದವರು ಭವಿಷ್ಯಲ್ಲಿ ತುಂಬಾ ಅನುಭವಿಸಬೇಕಾಗುತ್ತದೆ. ಮುಳುಗುವ ಹಡಗಿನಲ್ಲಿ ಪಯಣ ಎಂದು ಹಂಗಿಸಿದರು.
ಭಾರತೀಯ ಜನತಾ ಪಾರ್ಟಿ, ದೇಶದ ಅತಿ ದೊಡ್ಡ ಪಕ್ಷವಾಗಿದೆ. ಆದರೆ ಇವರೆಲ್ಲಾ ಹೋಗಿರುವ ಕಾಂಗ್ರೆಸ್ ಮುಕ್ತವಾಗುತ್ತಿದೆ, ಕಾಂಗ್ರೆಸ್ ಮುಳುಗುತ್ತಿದೆ ಇಂತಹ ಪಕ್ಷದಲ್ಲಿ ಹೋಗೋದು ಅವರ ಸ್ವಾರ್ಥಕ್ಕಾಗಿ ಹೋಗಿದ್ದಾರೆ ಎಂದರು.
ಭಾರತೀಯ ಜನತಾ ಪಕ್ಷ ಕಾರ್ಯಕರ್ತರ ಶಕ್ತಿಯ ಆಧಾರದ ಮೇಲೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ, ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಾವು ಬಹುಮತದೊಂದಿಗೆ ಕರ್ನಾಟಕದಲ್ಲಿ ಸರ್ಕಾರ ರಚನೆ ಮಾಡುತ್ತೇವೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.