ಶಿವಮೊಗ್ಗ: ಮಗಳು ಬಿಜೆಪಿ ಸೇರಲು ಹೊರಟಿರುವುದು ನನ್ನ ಎದೆಗೆ ಚೂರಿ ಹಾಕಿದಂತಾಗಿದೆ. ಆಕೆ ಈ ಕೆಲಸ ಮಾಡಬಾರದಿತ್ತು ಎಂದು ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.
ಪುತ್ರಿ ರಾಜನಂದಿನಿ ಬಿಜೆಪಿ ಸೇರಲು ಹೊರಟಿರುವ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು, ಈ ವಿಚಾರ ನನಗೆ ಗೊತ್ತಿರಲಿಲ್ಲ. ನನಗೆ ಈಗ ವಿಷಯ ಗೊತ್ತಾಯಿತು. ಅವಳು (ರಾಜ ನಂದಿನಿ) ಈ ರೀತಿ ಮಾಡುತ್ತಾಳೆ ಎಂಬುದನ್ನು ಕನಸಲ್ಲೂ ಯೋಚಿಸಿರಲಿಲ್ಲ. ಇದೆಲ್ಲ ಶಾಸಕ ಹರತಾಳು ಹಾಲಪ್ಪ ಅವರ ತಂತ್ರ ಇರಬಹುದು ಎಂದು ಹೇಳಿದ್ದಾರೆ.
ರಾಜಕಾರಣದಲ್ಲಿ ಬದ್ಧತೆ, ಸ್ಥಿರತೆ ಇಟ್ಟುಕೊಂಡು ಬೆಳೆದು ಬಂದವರು ನಾವು. ಆ ಸಂತೋಷ, ನೆಮ್ಮದಿ ನನಗೆ ಇದೆ. ಏನೇ ಆಗಲಿ ನಾನು ಕಾಂಗ್ರೆಸ್ ಬಿಟ್ಡು ಹೋಗಲ್ಲ. ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ನಿಲ್ಲುತ್ತೇನೆ ಎಂದು ಕಾಗೋಡು ತಿಮ್ಮಪ್ಪ ಸ್ಪಷ್ಟಪಡಿಸಿದರು.
ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.