ಬೆಳಗಾವಿ: ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಕೆ ಮಾಡಿದ ಆರೋಪದಡಿ ಕುಡಚಿ ಶಾಸಕ ಪಿ.ರಾಜೀವ್ ಅವರ ಮೇಲೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ.
ರಾಯಬಾಗ ತಾಲ್ಲೂಕಿನ ಮುಗಳಖೋಡದ ಕರಿಸಿದ್ಧೇಶ್ವರ ದೇವಸ್ಥಾನದಲ್ಲಿ ಏ.10ರಂದು ಶಾಸಕ ಪಿ. ನಡೆದ ಪ್ರಚಾರ ಸಭೆ ನಡೆಸಿದ್ದರು. ಆಗ ಮಕ್ಕಳನ್ನು ಉದ್ದೇಶಿಸಿ ಪ್ರಚಾರ ಮಾಡುವಂತೆ ತಿಳಿಸಿದ್ದರು. ಕೆಲವು ಬಾಲಕರು ಬಿಜೆಪಿ ಚಿಹ್ನೆ ಇರುವ ಟೀ–ಶಾರ್ಟ್, ಶಾಲು ಧರಿಸಿದ್ದರು. ಈ ಬಗ್ಗೆ ಚುನಾವಣಾಧಿಕಾರಿ ಶಾಸಕ ಹಾಗೂ ದೇವಸ್ಥಾನ ಸಮಿತಿಯವರ ವಿರುದ್ಧ ದೂರು ದಾಖಲಿಸಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ ಕಾಗವಾಡ ತಾಲ್ಲೂಕಿನ ಮಂಗಸೂಳಿಯಲ್ಲಿ ಏ. 10ರಂದು ನಡೆದ ಪ್ರಚಾರ ಸಭೆಯಲ್ಲಿ ಅಪ್ರಾಪ್ತರು ಭಾಗವಹಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿ ರಾಜು ಕಾಗೆ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಕೂಡ ಕಾಂಗ್ರೆಸ್ ಶಾಲು ಹಾಕಿರುವುದು ಗಮನಕ್ಕೆ ಬಂದಿದೆ. ಹೀಗಾಗಿ, ಕಾರ್ಯಕ್ರಮ ಆಯೋಜಕರ ವಿರುದ್ಧ ಕಾಗವಾಡ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಇವನ್ನೂ ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.