ಗಂಗಾವತಿ (ಕೊಪ್ಪಳ ಜಿಲ್ಲೆ): ನಗರದ ಕನಕಗಿರಿ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಬಳಿನ ಮತಗಟ್ಟೆ ಸಂಖ್ಯೆ 155 ರಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ಗಾಲಿ ಜನಾರ್ದನರೆಡ್ಡಿ ಬುಧವಾರ ಮತದಾನ ಮಾಡಿದರು.
ನಂತರ ಮಾತನಾಡಿ, ನಗರದ ಆರಾಧ್ಯದೈವ ಚೆನ್ನ ಬಸವ ತಾತನ ಹಾಗೂ ಗ್ರಾಮದೇವತೆ ದುರ್ಗಾದೇವಿ ಆರ್ಶಿವಾದ ಪಡೆದು ಬಂದಿದ್ದು, ವಿಧಾನಸಭಾ ಕ್ಷೇತ್ರದ ಮತದಾರರು ಕೆಆರ್‌ಪಿಪಿಗೆ ಬೆಂಬಲಿಸಿ ಮತದಾನ ನೀಡುತ್ತಾರೆ ಎಂಬ ವಿಶ್ವಾಸ ನನ್ನಲ್ಲಿದೆ ಎಂದರು.
ಈ ಬಾರಿ ಗಂಗಾವತಿ ವಿಧಾನಸಭಾ ಕ್ಷೇತ್ರದ ಫಲಿತಾಂಶದಲ್ಲಿ ಬಾರಿ ಅಂತರದಿಂದ ಗೆಲುವು ಸಾಧಿಸಲಿದ್ದೇನೆ. 13 ಕ್ಷೇತ್ರಗಳಲ್ಲಿ ಸ್ಪಷ್ಟವಾಗಿ ಗೆಲುವು ಸಾಧಿಸಲಿದ್ದು, ಉಳಿದ ಕ್ಷೇತ್ರದಲ್ಲಿ ಪೈಪೋಟಿ ಇದೆ ಎಂದರು.
ಬಳ್ಳಾರಿ ನಗರದಲ್ಲಿ ಕೆಆರ್‌ಪಿಪಿ ಅಭ್ಯರ್ಥಿ ಅರುಣಾ ಲಕ್ಷ್ಮಿ ಸಹ ಗೆಲುವು ಸಾಧಿಸಲಿದ್ದಾರೆ. ಗಂಗಾವತಿ ಕ್ಷೇತ್ರದಲ್ಲಿ ಪ್ರತಿಸ್ಪರ್ಧಿ ಯಾರು ಎಂಬ ಮಾಧ್ಯಮದವರ ಪ್ರಶ್ನೆಗೆ ಯಾರೂ ಸ್ಪರ್ಧಿಯಲ್ಲ ಎಂದರು.
ಫಲಿತಾಂಶದ ನಂತರ ಕೆಆರ್‌ಪಿಪಿ ಯಾವುದಾದರೂ ಒಂದು ಪಕ್ಷಕ್ಕೆ ಬೆಂಬಲ ನೀಡಬೇಕಾದ ಅವಶ್ಯಕತೆ ಇದ್ದು, ಕಾಂಗ್ರೆಸ್ ಸೇರಿದಂತೆ ಯಾವುದೇ ಪಕ್ಷವಾದರೂ ನಮ್ಮ ಪಕ್ಷದ ಪ್ರಣಾಳಿಕೆ ಈಡೇರಿಸುವವರಿಗೆ ಬೆಂಬಲ ನೀಡುತ್ತೇನೆ ಎಂದರು.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುವ ಸಂದರ್ಭ ಬಂದರೆ ಬೆಂಬಲ ಸೂಚಿಸುತ್ತೇನೆ ಎಂದು ಹೇಳಿದರು.
ಕೆಆರ್‌ಪಿಪಿ ಜಿಲ್ಲಾಧ್ಯಕ್ಷ ಮನೋಹರಗೌಡ ಹೇ ರೂರು, ರಾಜೇಶರೆಡ್ಡಿ ಸೇರಿದಂತೆ ಕಾರ್ಯಕರ್ತರು ಇದ್ಧರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.