ADVERTISEMENT

ಇಂಡಿ: ಕಾಂಗ್ರೆಸ್‌ನ ಯಶವಂತ ರಾಯಗೌಡ ಹ್ಯಾಟ್ರಿಕ್ ಸಾಧನೆ

​ಪ್ರಜಾವಾಣಿ ವಾರ್ತೆ
Published 13 ಮೇ 2023, 7:57 IST
Last Updated 13 ಮೇ 2023, 7:57 IST
   

ವಿಜಯಪುರ: ಭೀಮಾ ತೀರದ ಇಂಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ,‌ಶಾಸಕ ಯಶವಂತ ರಾಯಗೌಡ ಪಾಟೀಲ ಮೂರನೇ ಬಾರಿಗೆ ಜಯಗಳಿಸುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ.

ಜೆಡಿಎಸ್ ಅಭ್ಯರ್ಥಿ ಬಿ.ಡಿ.ಪಾಟೀಲ ಅವರ ವಿರುದ್ಧ 9690 ಮತಗಳ ಅಂತರದಿಂದ ವಿಜಯ ಸಾಧಿಸಿದ್ದಾರೆ.

ಯಶವಂತ ರಾಯಗೌಡರಿಗೆ 70,267 ಮತಗಳು, ಜೆಡಿಎಸ್ ಅಭ್ಯರ್ಥಿ ಬಿ.ಡಿ.ಪಾಟೀಲರಿಗೆ 60677 ಮತಗಳು ಲಭಿಸಿವೆ. ಬಿಜೆಪಿ ಅಭ್ಯರ್ಥಿ ಕಾಸುಗೌಡ ಬಿರಾದಾರ ಮೂರನೇ ಸ್ಥಾನ ಲಭಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.