ರಾಮನಗರ: ಡಿ.ಕೆ. ಶಿವಕುಮಾರ್ ಅವರನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿ ಸರ್ಕಾರ ಕುತಂತ್ರ ನಡೆಸಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ನಾನು ಸಹ ಕನಕಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ ಎಂದು ಸಂಸದ ಡಿ.ಕೆ. ಸುರೇಶ್ ತಿಳಿಸಿದರು.
ಕನಕಪುರದಲ್ಲಿ ಗುರುವಾರ ನಾಮಪತ್ರ ಸಲ್ಲಿಕೆ ಬಳಿಕ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಡಿ.ಕೆ. ಶಿವಕುಮಾರ್ ಅವರ ನಾಮಪತ್ರ ಕ್ರಮಬದ್ಧವಾಗಿದೆ. ಆದರೆ ಕುತಂತ್ರ ನಡೆಸಿ ಅವರ ನಾಮಪತ್ರ ತಿರಸ್ಕೃತ ಆಗಲೂ ಬಹುದು. ಆ ಮಾಹಿತಿ ಇರುವ ಕಾರಣ ನಾನು ಸಹ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ ಎಂದರು.
ಚುನಾವಣಾ ಆಯೋಗದ ಅಧಿಕಾರಿಗಳೂ ಸಹ ಸರ್ಕಾರಿ ಅಧಿಕಾರಿಗಳೇ ಆಗಿದ್ದಾರೆ. ಅವರು ಸರ್ಕಾರದ ಸೂಚನೆಯಂತೆ ಏನು ಬೇಕಾದರೂ ಮಾಡಬಹುದು. ಹೀಗಾಗಿ ನಾವು ಸಹ ಎಚ್ಚರಿಕೆ ಇಟ್ಟಿದ್ದೇವೆ. ಮುಂದಿನ ಬೆಳವಣಿಗೆಗಳನ್ನು ನೀವೇ ಕಾದು ನೋಡಿ ಎಂದರು.
ಪದ್ಮನಾಭ ನಗರದಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಇದೇ ವೇಳೆ ಅವರು ಸ್ಪಷ್ಟನೆ ನೀಡಿದರು.
ಇದನ್ನೂ ಓದಿ.. ಕನಕಪುರದಲ್ಲಿ ಸಂಸದ ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಕೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.