ನಾಗಮಂಗಲ (ಮಂಡ್ಯ ಜಿಲ್ಲೆ): ಬಿಜೆಪಿಯಿಂದ ಟಿಕೆಟ್ ವಂಚಿತರಾಗಿರುವ ಮಲ್ಲಿಕಾರ್ಜುನ (ಫೈಟರ್ ರವಿ) ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಮಂಗಳವಾರ ನಾಮಪತ್ರ ಸಲ್ಲಿಸಿದರು.
ಅವರು ಬಿಜೆಪಿ ಟಿಕೆಟ್ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ ಪಕ್ಷ ಸುಧಾ ಶಿವರಾಮೇಗೌಡರಿಗೆ ಟಿಕೆಟ್ ನೀಡಿತ್ತು. ರೌಡಿಶೀಟರ್ ಆರೋಪದ ಹಿನ್ನೆಲೆಯಲ್ಲಿ ಟಿಕೆಟ್ ನಿರಾಕರಿಸಿತ್ತು. ಇದರಿಂದ ಅಸಮಾಧಾನಗೊಂಡಿದ್ದ ಅವರು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.
ಬೆಂಬಲಿಗರೊಂದಿಗೆ ತಾಲ್ಲೂಕು ಕಚೇರಿವರೆಗೂ ಮೆರವಣಿಗೆಯಲ್ಲಿ ಬಂದ ಫೈಟರ್ ರವಿ ಉಮೇದುವಾರಿಕೆ ಸಲ್ಲಿಸಿದರು. ಈ ವೇಳೆ ಕೆಲವರು ಬಿಜೆಪಿ ಬಾವುಟ ಹಿಡಿದು ಅವರ ಪರ ಜೈಕಾರ ಹಾಕಿದರ. ಅಭಿಮಾನಿಗಳು, ಬೆಂಬಲಿಗರು ಪಟಾಕಿ ಸಿಡಿಸಿದರು, ಹೆಗಲ ಮೇಲೆ ಹೊತ್ತು ಮೆರವಣಿಗೆ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.