ADVERTISEMENT

ಲೋಕಸಭೆ ಚುನಾವಣೆ | ಮೀನುಗಾರರ ಸಮಸ್ಯೆಗೆ ಧ್ವನಿಯಾಗುವೆ: ಅಂಜಲಿ ನಿಂಬಾಳ್ಕರ್

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2024, 14:11 IST
Last Updated 4 ಏಪ್ರಿಲ್ 2024, 14:11 IST
ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ ಅವರು ಗೋಕರ್ಣ ಸಮೀಪದ ದೇವರಬಾವಿಯಲ್ಲಿ ಕಾರ್ಯಕರ್ತರೊಂದಿಗೆ ಸಭೆ ನಡೆಸಿದರು
ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ ಅವರು ಗೋಕರ್ಣ ಸಮೀಪದ ದೇವರಬಾವಿಯಲ್ಲಿ ಕಾರ್ಯಕರ್ತರೊಂದಿಗೆ ಸಭೆ ನಡೆಸಿದರು   

ಗೋಕರ್ಣ: ‘ಜಿಲ್ಲೆಯ ಮೀನುಗಾರರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಸಂಸತ್‍ನಲ್ಲಿ ಧ್ವನಿ ಎತ್ತಲಾಗುವುದು. ಅದಕ್ಕಾಗಿ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಿಸಿ ಅವಕಾಶ ಮಾಡಿಕೊಡಿ’ ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಹೇಳಿದರು.

ಇಲ್ಲಿನ ದೇವರಬಾವಿಯಲ್ಲಿ ಗುರುವಾರ ಕಾರ್ಯಕರ್ತರನ್ನು ಭೇಟಿ ಮಾಡಿ ಅವರು ಮಾತನಾಡಿದರು.

‘ಮೀನುಗಾರಿಕೆ ಕ್ಷೇತ್ರ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಅವುಗಳಿಗೆ ಪರಿಹಾರ ಕಂಡುಕೊಳ್ಳುವ ಕೆಲಸ ಸರಿಯಾಗಿ ನಡೆಯದ ಬಗ್ಗೆ ಬೇಸರವಿದೆ. ಕೇಂದ್ರ ಸರ್ಕಾರದ ಮಟ್ಟದಲ್ಲಿ ಪರಿಹಾರ ಕಂಡುಕೊಳ್ಳಬೇಕಿದ್ದ ವಿಷಯಗಳು ನನೆಗುದಿಗೆ ಬಿದ್ದಿದೆ. ಅವುಗಳಿಗೆ ಆದ್ಯತೆ ನೀಡಲಾಗುವುದು’ ಎಂದರು.

ADVERTISEMENT

ಬಳಿಕ ಗೋಕರ್ಣದ ಅಶೋಕೆಯಲ್ಲಿ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

‘ಚುನಾವಣೆಯಲ್ಲಿ ಗೆದ್ದು ಬಂದು ಜಿಲ್ಲೆಯ ಸಮಸ್ಯೆಗಳಿಗೆ ಪರಿಹಾರ ಕೊಡಿಸಿ’ ಎಂದು ಸ್ವಾಮೀಜಿ ಆಶೀರ್ವಾದ ನೀಡಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸಾಯಿ ಗಾಂವ್ಕರ್, ಮುಖಂಡರಾದ ಪ್ರದೀಪ ನಾಯಕ ದೇವರಬಾವಿ, ಭೂವನ್ ಭಾಗ್ವತ್, ನಿವೇದಿತ್ ಆಳ್ವಾ, ಗೋಪಾಲಕೃಷ್ಣ ನಾಯಕ, ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.