ಹಿಂದುಳಿದವರ ಮತ ವಿಭಜನೆ ಆದರೆ ಪುತ್ರ ಬಿ.ವೈ.ರಾಘವೇಂದ್ರ ಗೆಲುವು ಸುಲಭವಾಗಲಿದೆ ಎಂಬ ಕಾರಣಕ್ಕೆ ಕೆ.ಎಸ್.ಈಶ್ವರಪ್ಪ ಅವರನ್ನು ಬಿಜೆಪಿಯ ಬಂಡಾಯ ಅಭ್ಯರ್ಥಿ ಆಗಿ ಯಡಿಯೂರಪ್ಪ ಅವರೇ ಚುನಾವಣೆಗೆ ನಿಲ್ಲಿಸಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಭಾನುವಾರ ಶಿವಮೊಗ್ಗದಲ್ಲಿ ಹೇಳಿದರು. ಗೀತಾ ಶಿವರಾಜಕುಮಾರ್ ಡಮ್ಮಿ ಅಭ್ಯರ್ಥಿ ಎಂಬ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಅವರು, ‘ಈಶ್ವರಪ್ಪ ಅವರದ್ದು ಹುಸಿ ಬಂಡಾಯ. ಬಿಜೆಪಿಯಲ್ಲಿರುವ ನನ್ನ ಹಳೆಯ ಸ್ನೇಹಿತರು ಹೇಳುವಂತೆ ಚುನಾವಣೆಯಲ್ಲಿ ಬಿ.ವೈ.ರಾಘವೇಂದ್ರ ಗೆಲ್ಲಿಸಲು ಯಡಿಯೂರಪ್ಪ-ಈಶ್ವರಪ್ಪ ನಡುವೆ ಒಳ ಒಪ್ಪಂದ ಆಗಿದೆ. ಅದರಂತೆ ಚುನಾವಣೆ ಮುಗಿದ ನಂತರ ಕೆ.ಎಸ್.ಈಶ್ವರಪ್ಪ ರಾಜ್ಯಪಾಲ ಆಗಿ ನೇಮಕಗೊಳ್ಳಲಿದ್ದಾರೆ. ಅವರ ಪುತ್ರ ಕೆ.ಈ. ಕಾಂತೇಶ ಅವರನ್ನು ವಿಧಾನ ಪರಿಷತ್‌ಗೆ ನಾಮ ನಿರ್ದೇಶನ ಮಾಡಲಾಗುತ್ತಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.