ADVERTISEMENT

ರಾಜಕೀಯ ಶುದ್ಧೀಕರಣಕ್ಕೆ ಸನ್ಯಾಸಿಗಳ ಪ್ರವೇಶ ತಪ್ಪಲ್ಲ: ವಚನಾನಂದ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2024, 23:30 IST
Last Updated 13 ಏಪ್ರಿಲ್ 2024, 23:30 IST
<div class="paragraphs"><p>ವಚನಾನಂದ ಸ್ವಾಮೀಜಿ</p></div>

ವಚನಾನಂದ ಸ್ವಾಮೀಜಿ

   

ಲಕ್ಷ್ಮೇಶ್ವರ (ಗದಗ ಜಿಲ್ಲೆ): ‘ಉತ್ತರ ಭಾರತದ ಸನ್ಯಾಸಿಗಳಂತೆ ಶಿರಹಟ್ಟಿ ಭಾವೈಕ್ಯ ಪೀಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ರಾಜಕೀಯ ಶುದ್ಧೀಕರಣಕ್ಕೆ ರಾಜಕಾರಣಕ್ಕೆ ಬರುವುದು ತಪ್ಪಲ್ಲ’ ಎಂದು ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ತಿಳಿಸಿದರು.

ಪಟ್ಟಣದಲ್ಲಿ ಶನಿವಾರ ಮಾತನಾಡಿದ ಅವರು, ‘ಎಲ್ಲ ಚುನಾವಣೆಗಳಲ್ಲಿ ಪಂಚಮಸಾಲಿ ಸಮಾಜವನ್ನು ದುರ್ಬಳಕೆ ಮಾಡಲಾಗುತ್ತದೆ. ಈ ಹಿಂದಿನ ರಾಜ್ಯ ಸರ್ಕಾರ 2ಎ ಮೀಸಲಾತಿ ಘೋಷಿಸಿದರೂ ಅದು ಕೋರ್ಟ್‌ ಅಂಗಳ ತಲುಪಿದೆ. ಇದಕ್ಕಾಗಿ ಕಾನೂನು ಹೋರಾಟ ಮಾಡುತ್ತೇವೆ’ ಎಂದರು. ಕೇಂದ್ರದ ಒಬಿಸಿ ಪಟ್ಟಿಯಲ್ಲಿ ಪಂಚಮಸಾಲಿ ಸಮಾಜ ಸೇರ್ಪಡೆಗೊಂಡರೆ ಮಾತ್ರ ಸಮಾಜದ ಜನರು ಮುಂದುವರಿಯಲು ಸಾಧ್ಯ’ ಎಂದರು.

ADVERTISEMENT

‘ಲೋಕಸಭಾ ಚುನಾವಣೆಯಲ್ಲಿ ಪಂಚಮಸಾಲಿ ಸಮಾಜವನ್ನು ಕಡೆಗಣಿಸಲಾಗಿದೆ. ಪಂಚಮಸಾಲಿ ಸಮಾಜವನ್ನು ರಾಜಕೀಯ ದಾಳವನ್ನಾಗಿ ಬಳಸಿ, ಸಮಾಜದ ಜನಪ್ರತಿನಿಧಿಗಳಿಗೆ ಯಾವುದೇ ಪ್ರಮುಖ ಹುದ್ದೆಗಳನ್ನು ನೀಡದೆ ಅನ್ಯಾಯ ಮಾಡಲಾಗಿದೆ. ಈ ಅನ್ಯಾಯವನ್ನು ಇನ್ನೆಷ್ಟು ದಿನ ಸಹಿಸುವುದು’ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.