ADVERTISEMENT

ಅಭ್ಯರ್ಥಿ ಪರ ವಾಟ್ಸ್‌ಆ್ಯಪ್ ಸಂದೇಶ ರವಾನೆ: ಅಮಾನತು ಆದೇಶಕ್ಕೆ ತಡೆ

​ಪ್ರಜಾವಾಣಿ ವಾರ್ತೆ
Published 9 ಮೇ 2024, 0:23 IST
Last Updated 9 ಮೇ 2024, 0:23 IST
<div class="paragraphs"><p>ಕರ್ನಾಟಕ ಹೈಕೋರ್ಟ್</p></div>

ಕರ್ನಾಟಕ ಹೈಕೋರ್ಟ್

   

ಬೆಂಗಳೂರು: ಲೋಕಸಭೆ ಚುನಾವಣೆ ವೇಳೆ ಬಿಜೆಪಿ ಪರವಾದ ಪ್ರಚಾರ ಸಂದೇಶವನ್ನು ವಾಟ್ಸ್‌ಆ್ಯಪ್‌ ಗ್ರೂಪ್‌ಗೆ ರವಾನಿಸಿದ ಆರೋಪದಡಿ ಹಾಸನದ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿಯ ಪ್ರಥಮ ದರ್ಜೆ ಸಹಾಯಕ ನೌಕರ ಬಿ.ಎಚ್. ಮಂಜುನಾಥ್ ಅವರನ್ನು ಸೇವೆಯಿಂದ ಅಮಾನುತುಗೊಳಿಸಿದ ಜಿಲ್ಲಾ ಚುನಾವಣಾ ಅಧಿಕಾರಿಯ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.

ಜಿಲ್ಲಾಧಿಕಾರಿ ಆದೇಶ ಪ್ರಶ್ನಿಸಿ ಬಿ.ಎಚ್.ಮಂಜುನಾಥ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ರಜಾಕಾಲದ ಪೀಠದಲ್ಲಿನ ನ್ಯಾಯಮೂರ್ತಿ ಎಸ್. ಸುನಿಲ್ ದತ್ ಯಾದವ್ ನೇತೃತ್ವದ ವಿಭಾಗೀಯ ನ್ಯಾಯಪೀಠವು ಈ ಕುರಿತಂತೆ ಆದೇಶಿಸಿದೆ.

ADVERTISEMENT

ಪ್ರತಿವಾದಿಗಳಾದ ಹಾಸನ ಜಿಲ್ಲಾ ಚುನಾವಣಾಧಿಕಾರಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರಿಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಲಾಗಿದೆ.

ಪ್ರಕರಣವೇನು?: 

‘ಅರ್ಜಿದಾರರು 2024ರ ಮಾರ್ಚ್ 31ರಂದು ಬಿಜೆಪಿ ಪರ ಚುನಾವಣಾ ಪ್ರಚಾರದ ಸಂದೇಶವನ್ನು ಹಾಸನ ಪ್ರೀತಂ ಜೆ. ಗೌಡ ಎಂ.ಎಲ್.ಎ ಎಂಬ ವಾಟ್ಸ್ ಆ್ಯಪ್‌ ಗ್ರೂಪ್ ಮೂಲಕ ರವಾನಿಸಿದ್ದಾರೆ" ಎಂದು ಆರೋಪಿಸಿ ನಾಗೇಂದ್ರ ರಾಮ ಎಂಬುವವರು ಜಿಲ್ಲಾ ಚುನಾವಣಾ ಅಧಿಕಾರಿಗೆ ಇ-ಮೇಲ್‌ ಮೂಲಕ ದೂರು ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿ, ಅರ್ಜಿದಾರರನ್ನು ಸೇವೆಯಿಂದ ಅಮಾನತುಗೊಳಿಸಿ ಏಪ್ರಿಲ್ 8ರಂದು ಜಿಲ್ಲಾ ಚುನಾವಣಾಧಿಕಾರಿ ಆದೇಶಿಸಿದ್ದರು. ಈ ಆದೇಶ ಪ್ರಶ್ನಿಸಿ ಮಂಜುನಾಥ್‌ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಗೆ (ಕೆಎಟಿ) ಅರ್ಜಿ ಸಲ್ಲಿಸಿದ್ದರು. ಆದೇಶಕ್ಕೆ ತಡೆ ನೀಡಲು ಕೆಎಟಿ ನಿರಾಕರಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.