ಉಡುಪಿ: ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಉಡುಪಿ ಶಾಸಕ ಕೆ.ರಘುಪತಿ ಭಟ್ ಕಣ್ಣೀರು ಹಾಕಿದ್ದಾರೆ. ಪಕ್ಷದ ನಿರ್ಧಾರದ ಬಗ್ಗೆ ಬೇಸರವಿಲ್ಲ; ಆದರೆ, ಪಕ್ಷ ನಡೆಸಿಕೊಂಡ ರೀತಿ ಬೇಸರ ತಂದಿದೆ ಎಂದು ದುಃಖ ತೋಡಿಕೊಂಡಿದ್ದಾರೆ.
ಜಾತಿಯ ಕಾರಣಕ್ಕೆ ಟಿಕೆಟ್ ಕೊಡಲು ಸಾಧ್ಯವಿಲ್ಲ ಎಂದು ಮೊದಲೇ ಹೇಳಿದ್ದರೆ, ಈಶ್ವರಪ್ಪ ಅವರಂತೆ ಸ್ವಯಂ ರಾಜಕೀಯ ನಿವೃತ್ತಿ ಪಡೆಯುತ್ತಿದ್ದೆ. ಕೊನೆಯ ಕ್ಷಣದವರೆಗೂ ಟಿಕೆಟ್ ಕೊಡುವುದಾಗಿ ಹಿರಿಯ ನಾಯಕರು ಭರವಸೆ ನೀಡಿದ್ದರು. ಅಗತ್ಯಬಿದ್ದರೆ 2 ವಿಧಾನಸಭಾ ಕ್ಷೇತ್ರಗಳಿಗೆ ಬ್ರಾಹ್ಮಣ ಸಮುದಾಯದವರನ್ನು ಪರಿಗಣಿಸುವುದಾಗಿ ಹೇಳಿಯೂ ಟಿಕೆಟ್ ನಿರಾಕರಿಸಿರುವುದು ನೋವು ತಂದಿದೆ ಎಂದು ರಘುಪತಿ ಭಟ್ ಹೇಳಿದರು.
ಉಡುಪಿ ವಿಧಾನಸಭಾ ಕ್ಷೇತ್ರದ ಮತದಾರರು ಮೂರು ಬಾರಿ ಶಾಸಕರಾಗಿ ಆಯ್ಕೆ ಮಾಡಿದ್ದಾರೆ. ಇಲ್ಲಿನ ಮತದಾರರು ಎಂದೂ ಜಾತಿ ನೋಡಿ ಮತ ಹಾಕಲಿಲ್ಲ. ಬಿಲ್ಲವರು, ಮೊಗವೀರರು ಸೇರಿದಂತೆ ಅತಿ ಹೆಚ್ಚು ಹಿಂದುಳಿದ ವರ್ಗಗಳ ಮತದಾರರು ಇರುವ ಕ್ಷೇತ್ರದಿಂದ ಆಯ್ಕೆಯಾದ ಬಗ್ಗೆ ಹೆಮ್ಮೆ ಇದೆ ಎಂದರು.
ಇವನ್ನೂ ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.