ಬೆಂಗಳೂರು: ತಮಗೆ ಉಪ ಮುಖ್ಯಮಂತ್ರಿ ಸ್ಥಾನ ದೊರೆತಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ‘ಹೈಕಮಾಂಡ್ ನಿರ್ಧಾರ ಕೈಗೊಂಡಿದೆ. ಈ ನಿರ್ಧಾರಕ್ಕೆ ನಾನು ಬದ್ಧನಾಗಿದ್ದೇನೆ’ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರ ನಿವಾಸಕ್ಕೆ ಬೆಳಗಿನ ಉಪಹಾರಕ್ಕೆಂದು ಆಗಮಿಸಿದ ಡಿ.ಕೆ ಶಿವಕುಮಾರ್ ಮಾಧ್ಯಮಗಳೊಂದಿಗೆ ಮಾತನಾಡಿದರು.
ಅಲ್ಲದೇ, ಪಕ್ಷದ ಹಿತದೃಷ್ಟಿಯಿಂದ ಈ ತೀರ್ಮಾನವನ್ನು ನಾನ್ಯಾಕೆ ಒಪ್ಪಿಕೊಳ್ಳಬಾರದು? ಎಂದೂ ಅವರು ಹೇಳಿದರು.
ಉಪ ಮುಖ್ಯಮಂತ್ರಿ ಸ್ಥಾನ ಸಿಕ್ಕಿರುವುದು ಸಂತೋಷ ತಂದಿದೆಯೇ ಎಂಬ ಪ್ರಶ್ನೆಗೆ ಅವರು ಉತ್ತರಿಸಿಲು ನಿರಾಕರಿಸಿದರು.
‘ಡಿ.ಕೆ ಶಿವಕುಮಾರ್ ಉಪ ಮುಖ್ಯಮಂತ್ರಿಯಾಗುವುದು ನನಗೆ ಸಂಪೂರ್ಣ ಖುಷಿ ತಂದಿಲ್ಲ. ಆದರೆ, ಕರ್ನಾಟಕದ ಜನರ ಹಿತದೃಷ್ಟಿಯಿಂದ ನಾವು ನಮ್ಮ ವಾಗ್ದಾನಗಳನ್ನು ಈಡೇರಿಸಬೇಕಾಗಿದೆ. ಆದ್ದರಿಂದಲೇ ಶಿವಕುಮಾರ್ ಉಪ ಮುಖ್ಯಮಂತ್ರಿ ಸ್ಥಾನ ಒಪ್ಪಿಕೊಂಡಿದ್ದಾರೆ. ಅವರು ಮುಖ್ಯಮಂತ್ರಿಯಾಗಲೆಂದು ನಾನು ಬಯಸಿದೆ. ಅದು ಆಗಿಲ್ಲ. ಇನ್ನೂ ಬಹಳಷ್ಟು ಸಮಯವಿದೆ. ನಾವು ಕಾದು ನೊಡುತ್ತೇವೆ‘ ಎಂದು ಮಾಧ್ಯಮಗಳಿಗೆ ಸಂಸದ ಡಿ.ಕೆ ಸುರೇಶ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.