ಕಲಬುರಗಿ: ಹಾಲಿ ಶಾಸಕ, ಕೆಕೆಆರ್ಟಿಸಿ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜಕುಮಾರ ಪಾಟೀಲ ತೇಲ್ಕೂರ ಅವರಿಗೆ ಮೂರನೇ ಪಟ್ಟಿಯಲ್ಲಿ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ.
ಮೊದಲ ಹಾಗೂ ಎರಡನೇ ಪಟ್ಟಿಯಲ್ಲಿ ಟಿಕೆಟ್ ಸಿಗದೇ ಇರುವುದರಿಂದ ಈ ಬಾರಿ ಟಿಕೆಟ್ ಕೈತಪ್ಪಬಹುದು ಎಂಬ ಚರ್ಚೆ ಕ್ಷೇತ್ರದಲ್ಲಿ ನಡೆದಿತ್ತು. ಇದೀಗ ಕೊನೆಗೂ ತೇಲ್ಕೂರ ಅವರಿಗೇ ಟಿಕೆಟ್ ಘೋಷಿಸಲಾಗಿದೆ.
ಟಿಕೆಟ್ ಘೋಷಣೆ ವಿಳಂಬವಾಗಿದ್ದರೂ ಕ್ಷೇತ್ರದಲ್ಲಿ ನಿರಂತರವಾಗಿ ಪ್ರಚಾರದಲ್ಲಿ ರಾಜಕುಮಾರ ಪಾಟೀಲ ತೊಡಗಿಸಿಕೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.