ಹುಬ್ಬಳ್ಳಿ: ಅಶ್ಲೀಲ ವಿಡಿಯೊ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ಅಮಾನತುಗೊಳಿಸಿದೆ.
ಇಲ್ಲಿನ ಖಾಸಗಿ ಹೋಟೆಲ್‌ನಲ್ಲಿ ಮಂಗಳವಾರ ನಡೆದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಅಮಾನತುಗೊಳಿಸಲು ಒಮ್ಮತದ ತೀರ್ಮಾನಗೊಂಡು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರಿಗೆ ತಿಳಿಸಲಾಯಿತು. ತಕ್ಷಣ ಅಮಾನತುಗೊಳಿಸಿ ದೇವೇಗೌಡರು ಆದೇಶ (ಫ್ಯಾಕ್ಸ್ ಮೂಲಕ) ಹೊರಡಿಸಿದರು.
ಆದೇಶ ಪ್ರತಿಯನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಮಾಧ್ಯಮಗಳಿಗೆ ಪ್ರದರ್ಶಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.