ADVERTISEMENT

LS polls: ಏ.24ರಿಂದ 26ರವರೆಗೆ ರೆಸಾರ್ಟ್‌ ಹೋಂಸ್ಟೇಗಳಲ್ಲಿ ವಾಸ್ತವ್ಯ ನಿರ್ಬಂಧ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2024, 0:30 IST
Last Updated 14 ಏಪ್ರಿಲ್ 2024, 0:30 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಹಾಸನ: ಲೋಕಸಭೆ ಚುನಾವಣೆಗೆ ಏ.26 ರಂದು ಮತದಾನ ನಡೆಯಲಿದ್ದು, ಆ ಸಂದರ್ಭದಲ್ಲಿ ಎಲ್ಲರೂ ತಮ್ಮ ಮತಕ್ಷೇತ್ರಗಳಲ್ಲಿ ಹಾಜರಿದ್ದು, ಮತದಾನ ಮಾಡಬೇಕು ಎಂಬ ಉದ್ದೇಶದಿಂದ ಏ.24 ರಂದು ಸಂಜೆ 6 ಗಂಟೆಯಿಂದ ಏ.26 ರ ಮಧ್ಯರಾತ್ರಿ 12 ಗಂಟೆಯವರೆಗೆ ಜಿಲ್ಲೆಯ ಎಲ್ಲ ರೆಸಾರ್ಟ್‌, ವಸತಿಯುತ ಹೋಟೆಲ್‌, ಹೋಂಸ್ಟೇಗಳಲ್ಲಿ ವಾಸ್ತವ್ಯವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ಆದೇಶ ಹೊರಡಿಸಿದ್ದಾರೆ.

‘ಮತದಾನ ನಡೆಯುವ ದಿನ ರಜೆ ಇರಲಿದ್ದು, ಆ ಸಂದರ್ಭದಲ್ಲಿ ರೆಸಾರ್ಟ್‌, ಹೋಟೆಲ್‌ ಹಾಗೂ ಹೋಂಸ್ಟೇಗಳಲ್ಲಿ ತಂಗುವ ಪ್ರವಾಸಿಗರು, ಮತದಾನ ಮಾಡದೇ ಇರುವ ಸಾಧ್ಯತೆ ಇದೆ. ಹಾಗಾಗಿ ಪ್ರಜಾಪ್ರಭುತ್ವದ ಆಶಯವಾದ ಮತದಾನದ ಹಕ್ಕನ್ನು ಚಲಾಯಿಸುವ ಉದ್ದೇಶದಿಂದ ಈ ಆದೇಶ ಹೊರಡಿಸಲಾಗಿದೆ’ ಎಂದು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.