ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ತಮ್ಮ ಪತಿ ಅನಂತಕುಮಾರ್ ಅವರು ಲಾಲ್‌ಬಾಗ್‌ನಲ್ಲಿ ನೆಟ್ಟ ಗಿಡ ಬಾಡಿ ಹೋಗಿರುವ ಬಗ್ಗೆ ಮಾಡಿರುವ ಟ್ವೀಟ್‌ವೊಂದು ಭಾರಿ ಚರ್ಚೆಗೆ ಕಾರಣವಾಗಿದೆ.
‘2015ರ ಜೂನ್ 5ರಂದು ಲಾಲ್‌ಬಾಗ್ ಪಶ್ಚಿಮ ದ್ವಾರದ ಬಳಿ ಅನಂತಕುಮಾರ್ ಅವರು ಈ ಗಿಡ ನೆಟ್ಟಿದ್ದರು. ಯಾಕೋ ಮುದುರಿ ಹೋಗಿದೆ. ಲಾಲ್‌ಬಾಗ್ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದೇವೆ. ಅನಂತಕುಮಾರರ ಅನುಪಸ್ಥಿತಿಯಲ್ಲಿ ಈ ಗಿಡವನ್ನು ಉಳಿಸುವ ಜವಾಬ್ದಾರಿ ನಮ್ಮದು ಎಂಬುದು ನನ್ನ ಭಾವನೆ’ ಎಂದಿದ್ದಾರೆ.
ತೇಜಸ್ವಿನಿ ಅವರು ವಿಧಾನಸಭಾ ಚುನಾವಣೆ ಟಿಕೆಟ್ ಆಕಾಂಕ್ಷಿಯಾಗಿದ್ದು, ಅವರಿಗೆ ಟಿಕೆಟ್ ತಪ್ಪಿರುವುದರಿಂದ ತಮ್ಮ ವೇದನೆಯನ್ನು ಸೂಚ್ಯವಾಗಿ ಈ ರೀತಿ ವ್ಯಕ್ತಪಡಿಸಿರಬಹುದು ಎಂಬ ಚರ್ಚೆ ನಡೆಯುತ್ತಿದೆ.
ಈ ಟ್ವೀಟ್ ಮಾಡುವುದಕ್ಕೂ ಮುನ್ನ ಅವರು, 'ಮಾತು ಬೆಳ್ಳಿ ಹೌದೋ ಅಲ್ಲವೋ ಗೊತ್ತಿಲ್ಲ, ಆದರೆ ಮೌನ ಮಾತ್ರ ಬಂಗಾರ. ಏನಂತಿರಿ?' ಎಂದು ಟ್ವೀಟ್ ಮಾಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.