ಹಾಸನ: ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇರೆಗೆ ಅರಸೀಕೆರೆ ಕ್ಷೇತ್ರದ ಶಾಸಕ ಕೆ.ಎಂ.ಶಿವಲಿಂಗೇಗೌಡ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಮಾ. 20ರಂದು ಅರಸೀಕೆರೆ ಸಿಂಧು ಭವನ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಶಾಸಕರು ಮೋದಿ ಟೀಕಿಸುವ ಭರದಲ್ಲಿ ‘ಮೋದಿ, ಮೋದಿ ಎಂದು ಬರುವವರ ದವಡೆಗೆ ಹೊಡೆಯಿರಿ’ ಎಂದು ವಿವಾದಾತ್ಮಕವಾಗಿ ಭಾಷಣ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಶಾಸಕರ ವಿರುದ್ಧ ಬಿಜೆಪಿ ಜಿಲ್ಲಾ ವಕ್ತಾರ ಎನ್.ಡಿ.ಪ್ರಸಾದ್ ಅವರು ಸಹಾಯಕ ಚುನಾವಣಾ ಅಧಿಕಾರಿಗೆ ದೂರು ನೀಡಿದ್ದರು. ಫ್ಲೈಯಿಂಗ್ ಸ್ಕ್ವಾಡ್ ಪ್ರಭಾಕರ್ ದೂರ ಆಧರಿಸಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.