ಕೋಲ್ಕತ್ತ: ರೂಪದರ್ಶಿ, ಬಂಗಾಳಿ ನಟಿ ಬಿದಿಶಾ ಡಿ ಮಜುಂದಾರ್ ಅವರ ಮೃತದೇಹ ಬುಧವಾರ ಕೋಲ್ಕತ್ತಾದ ನಾಗರ್‌ಬಜಾರ್‌ನ ತಮ್ಮ ಫ್ಲಾಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
21 ವರ್ಷದ ಬಿದಿಶಾ ಕಳೆದ ನಾಲ್ಕು ತಿಂಗಳಿನಿಂದ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದರು.
ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂದು ತಿಳಿಯಲು ತನಿಖೆ ಆರಂಭಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.
ಇನ್ನೊಂದೆಡೆ, ಫ್ಲಾಟ್‌ನಲ್ಲಿ ಡೆತ್ ನೋಟ್ ಪತ್ತೆಯಾಗಿದೆ ಎಂದು ವರದಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.