ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಘೋಸ್ಟ್‘ನಲ್ಲಿ ಬಾಲಿವುಡ್ ನಟ ಅನುಪಮ್ ಖೇರ್ ನಟಿಸುತ್ತಿದ್ದಾರೆ. ಚಿತ್ರರಂಗದಲ್ಲಿ ಸುಮಾರು 4 ದಶಕ ಪೂರೈಸಿರುವ ಖೇರ್, ಇದೇ ಮೊದಲ ಬಾರಿಗೆ ಕನ್ನಡ ಚಿತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಶಿವಣ್ಣ, ತಮಿಳು ನಟ ಜಯರಾಂ ಜತೆಗೆ ಅನುಪಮ್ ಖೇರ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದು, ಬೆಂಗಳೂರಿನ ಹೊರವಲಯದಲ್ಲಿ ನಡೆಯುತ್ತಿರುವ ಚಿತ್ರೀಕರಣದಲ್ಲಿ ಪಾಲ್ಗೊಂಡರು. ಮಾಧ್ಯಮಗಳ ಜತೆ ಅನುಭವ ಹಂಚಿಕೊಂಡ ಖೇರ್, ಶಿವಣ್ಣರಂತಹ ಹಿರಿಯ ನಟರೊಂದಿಗೆ ಅಭಿನಯಿಸುವುದು ಹೆಮ್ಮೆಯ ಸಂಗತಿ. ಒಂದು ಭಿನ್ನವಾದ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಮೊದಲ ಸಲ ಕನ್ನಡ ಚಿತ್ರದಲ್ಲಿ ನಟಿಸುತ್ತಿರುವುದು ಖುಷಿ ನೀಡಿದೆ ಎಂದರು.
ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದ್ದು, ಶ್ರೀನಿ ಚಿತ್ರದ ನಿರ್ದೇಶಕರು. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರಿನ ಹೊರವಲಯದಲ್ಲಿ ಅದ್ದೂರಿ ಸೆಟ್‌ಗಳನ್ನು ಹಾಕಲಾಗಿದೆ. ಚಿತ್ರದ ಬಹುಭಾಗ ಚಿತ್ರೀಕರಣ ಬೆಂಗಳೂರು ಹಾಗೂ ಮೈಸೂರಿನಲ್ಲಿ ಪೂರ್ಣಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.