ಬೆಂಗಳೂರು: ಸ್ಯಾಂಡಲ್‌ವುಡ್ ನಟ ದ್ರುವ ಸರ್ಜಾ ದಂಪತಿ ವರಮಹಾಲಕ್ಷ್ಮಿ ಹಬ್ಬದಂದು ಎರಡನೇ ಮಗುವಿನ ಆಗಮನದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
ವಿಶೇಷ ವಿಡಿಯೊದ ಮೂಲಕ ಖುಷಿ ಹಂಚಿಕೊಂಡ ದಂಪತಿ ‘ಸೆಪ್ಟೆಂಬರ್‌ನಲ್ಲಿ ಲಿಟ್ಲ್‌ಸ್ಟಾರ್‌ನ ಆಗಮನವಾಗುತ್ತಿದೆ’ ಎಂದು ಹೇಳಿದ್ದಾರೆ.
ಇನ್ಸ್ಟಾಗ್ರಾಮ್ ಖಾತೆಯಲ್ಲಿ ದ್ರುವ ಸರ್ಜಾ ಅವರು ವಿಡಿಯೊವನ್ನು ಶೇರ್ ಮಾಡಿಕೊಂಡಿದ್ದಾರೆ.
ದ್ರುವ ಸರ್ಜಾ ಪೋಸ್ಟ್‌ಗೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.
ದಂಪತಿಗೆ ಈಗಾಗಲೇ ಒಬ್ಬಳು ಮಗಳಿದ್ದಾಳೆ.
24 ನವೆಂಬರ್ 2019ರಂದು ಧ್ರುವ ಸರ್ಜಾ ಹಾಗೂ ಪ್ರೇರಣಾ ಶಂಕರ್ ಮದುವೆಯಾಗಿದ್ದರು. 2022ರ ಅಕ್ಟೋಬರ್‌ನಲ್ಲಿ ಪ್ರೇರಣಾ ಹೆಣ್ಣುಮಗುವಿಗೆ ಜನ್ಮ ನೀಡಿದ್ದರು.
ಸದ್ಯ ದ್ರುವಾ ಸರ್ಜಾ ಎ.ಪಿ ಅರ್ಜುನ್ ಜತೆಗಿನ ಮಾರ್ಟಿನ್ ಸಿನಿಮಾ ಶೂಟಿಂಗ್ ಮುಗಿಸಿದ್ದು, ಪ್ರೇಮ್ ಜತೆಗೆ ಕೆಡಿ ಸಿನಿಮಾ ಕೆಲಸಗಳಲ್ಲಿ ತೊಡಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.