ನವದೆಹಲಿ: ₹200 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಜಾಕ್ವೆಲಿನ್ಫರ್ನಾಂಡಿಸ್ ಅವರು ಬುಧವಾರ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.
ಜಾಕ್ವೆಲಿನ್ ಅವರು ದೆಹಲಿಯ ಆರ್ಥಿಕ ಅಪರಾಧ ವಿಭಾಗದ ಕಚೇರಿಗೆ ಬೆಳಿಗ್ಗೆ 11.30ರ ಸುಮಾರಿಗೆ ಆಗಮಿಸಿದರು ಎಂದು ಮೂಲಗಳು ತಿಳಿಸಿವೆ.
ಹಣ ಅಕ್ರಮ ವರ್ಗಾವಣೆ ಮತ್ತು ಹಲವರಿಗೆ ವಂಚಿಸಿದ್ದ ಆರೋಪದಡಿ ಪ್ರಕರಣ ಪ್ರಮುಖ ಆರೋಪಿ ಸುಕೇಶ್ ಚಂದ್ರಶೇಖರ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಈಗಾಗಲೇ ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.
ಸುಕೇಶ್ ಅವರೊಂದಿಗಿನ ಸಂಬಂಧ ಮತ್ತು ಅವರಿಂದ ಪಡೆದ ಉಡುಗೊರೆಗಳ ಕುರಿತು ಜಾಕ್ವೆಲಿನ್‌ಗೆ ಪ್ರಶ್ನೆಗಳನ್ನು ಕೇಳುವುದಕ್ಕೆಸಿದ್ಧತೆ ಮಾಡಿಕೊಂಡಿರುವುದಾಗಿಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬೆಂಗಳೂರು ಮೂಲದ ಸುಕೇಶ್ ಚಂದ್ರಶೇಖರ್ ಎಂಬಾತ ಉದ್ಯಮಿ ಶಿವಿಂದರ್ ಮೋಹನ್ ಸಿಂಗ್ ಎಂಬುವರ ಪತ್ನಿ ಅದಿತಿ ಸಿಂಗ್‌ಗೆ ಕರೆ ಮಾಡಿ ತಾನು ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿ ಎಂದು ಪರಿಚಯಿಸಿಕೊಂಡಿದ್ದ. ಬಳಿಕ ಪಕ್ಷಕ್ಕೆ ದೇಣಿಗೆ ನೀಡುವಂತೆ ಹೇಳಿ ಅವರಿಂದ ₹200 ಕೋಟಿಗೂ ಅಧಿಕ ಹಣ ಪಡೆದು ವಂಚಿಸಿದ್ದ. ಈ ಪೈಕಿ ₹10 ಕೋಟಿ ಮೌಲ್ಯದ ಉಡುಗೊರೆಗಳನ್ನು ಜಾಕ್ವೆಲಿನ್‌ಗೆ ನೀಡಿದ್ದ. ಉಡುಗೊರೆ ಪಡೆದಿರುವುದನ್ನು ಜಾಕ್ವೆಲಿನ್ ಒಪ್ಪಿಕೊಂಡಿದ್ದರು.
ಇವನ್ನೂ ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.