ಹೈದರಾಬಾದ್: ಪಾರ್ಟಿ ಮಾಡುತ್ತಿದ್ದ ಆರೋಪದ ಮೇರೆಗೆ ಟಾಲಿವುಡ್ ಸ್ಟಾರ್ ನಟ ಚಿರಂಜೀವಿ ತಮ್ಮನಾಗ ಬಾಬು ಪುತ್ರಿಹಾಗೂ ನಟಿ ನಿಹಾರಿಕಕೊನಿಡೇಲಾರನ್ನು ಪೊಲೀಸರು ವಶಕ್ಕೆ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಹಾರಿಕ ಯಾವುದೇ ತಪ್ಪು ಮಾಡಿಲ್ಲ ಎಂದು ನಾಗ ಬಾಬು ಹೇಳಿದ್ದಾರೆ.
ಹೈದರಾಬಾದ್‌ನಲ್ಲಿ ನಿಗದಿತ ಸಮಯವನ್ನು ಮೀರಿ ಪಬ್‌ನಲ್ಲಿ ಪಾರ್ಟಿ ಮಾಡುತ್ತಿದ್ದ ಆರೋಪದ ಮೇರೆಗೆನಿಹಾರಿಕಾ ಹಾಗೂ ಗಾಯಕ ರಾಹುಲ್ ಸಿಪ್ಲಿಗುಂಜ್ ಸೇರಿದಂತೆ 144 ಜನರನ್ನು ಪೊಲೀಸರು ಬಂಧಿಸಿದ್ದರು.
'ಪಾರ್ಟಿಯಲ್ಲಿ ಹಾಜರಿದ್ದನಿಹಾರಿಕ ಯಾವುದೇ ತಪ್ಪು ಮಾಡಿಲ್ಲ, ಸ್ನೇಹಿತರ ಜತೆ ಸೇರಿದ್ದರು ಅಷ್ಟೇ. ಮಗಳುತಪ್ಪು ಮಾಡಿಲ್ಲ ಎಂದು ನಮ್ಮಮನಸಾಕ್ಷಿಗೆ ಗೊತ್ತಿದೆ. ನಿಹಾರಿಕ ಯಾವುದೇ ತಪ್ಪು ಮಾಡಿಲ್ಲ ಎಂದು ಪೊಲೀಸರು ಕೂಡ ಸ್ಪಷ್ಟಪಡಿಸಿದ್ದಾರೆ. ಅಭಿಮಾನಿಗಳು ಸಾಮಾಜಿಕ ಮಾಧ್ಯಮಗಳ ಗಾಳಿ ಮಾತುಗಳನ್ನು ನಂಬಬಾರದು‘ ಎಂದು ನಾಗ ಬಾಬು ವಿಡಿಯೊ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಈಗಾಗಲೇ ಪೊಲೀಸರುಪಾರ್ಟಿಯಲ್ಲಿದ್ದವರನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ. ಪಾರ್ಟಿ ಮಾಡುತ್ತಿದ್ದವರ ಹಿನ್ನಲೆ, ಅವರಿಗೆ ಡ್ರಗ್ಸ್ ದೊರೆತಿರುವಆಯಾಮಗಳಲ್ಲಿ ಪೊಲೀಸರು ವಿಶೇಷ ತಂಡಗಳನ್ನು ರಚಿಸಿ ತನಿಖೆ ಮಾಡುತ್ತಿದ್ದಾರೆಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನಿಹಾರಿಕ ಅವರನ್ನು ವಿಚಾರಣೆ ನಡೆಸಿದ ಬಳಿಕ ಪೊಲೀಸರುಬಿಡುಗಡೆ ಮಾಡಿದ್ದಾರೆ. ಬಿಡುಗಡೆ ಬಳಿಕ ನಿಹಾರಿಕ ಮಾಧ್ಯಮಗಳೊಂದಿಗೆ ಮಾತನಾಡಲು ನಿರಾಕರಿಸಿದ್ದಾರೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ.
ಐಷಾರಾಮಿ ಬಂಜಾರಾ ಹಿಲ್ಸ್‌ನಲ್ಲಿರುವ ರಾಡಿಸನ್ ಬ್ಲು ಹೋಟೆಲ್‌ನ ಪಬ್ ಮೇಲೆ ಮುಂಜಾನೆ 3 ಗಂಟೆ ಸುಮಾರಿಗೆ ಹೈದರಾಬಾದ್ ಸಿಟಿ ಪೊಲೀಸ್‌ನ ಟಾಸ್ಕ್ ಫೋರ್ಸ್ ಸಿಬ್ಬಂದಿ ದಾಳಿ ನಡೆಸಿದ್ದಾರೆ. ಹೋಟೆಲ್ ಆವರಣದಲ್ಲಿ ಕೊಕೇನ್ ಸೇರಿ ಇತರೆ ನಿಷೇಧಿತ ವಸ್ತುಗಳು ಪತ್ತೆಯಾಗಿವೆ. ಪಾರ್ಟಿ ಮಾಡುತ್ತಿದ್ದವರಲ್ಲಿ ಆಂಧ್ರಪ್ರದೇಶ ಪೊಲೀಸ್‌ನ ಮಾಜಿ ಮಹಾನಿರ್ದೇಶಕರ ಪುತ್ರಿ ಮತ್ತು ತೆಲುಗು ದೇಶಂ ಪಕ್ಷಕ್ಕೆ ಸೇರಿದ ಸಂಸದರ ಪುತ್ರ ಹಾಗೂ ಇತರೆ ಪ್ರಸಿದ್ಧ ವ್ಯಕ್ತಿಗಳ ಮಕ್ಕಳು ಸೇರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.