ಬೆಂಗಳೂರು: ಜಾತಿ ನಿಂದನೆ ಆರೋಪಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಪ್ರಕಟಿಸಿರುವ ನಟ ಉಪೇಂದ್ರ, ‘ನನ್ನ ಮೇಲೆ ಏಕೆ ಇಷ್ಟೊಂದು ದ್ವೇಷ’ ಎಂದು ಪ್ರಶ್ನಿಸಿದ್ದಾರೆ.
‘ಫೇಸ್‌ಬುಕ್ ಹಾಗೂ ಇನ್‌ಸ್ಟಾಗ್ರಾಂ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊ ನೇರಪ್ರಸಾರದ ಸಂದರ್ಭದಲ್ಲಿ ಬಾಯಿತಪ್ಪಿ ಒಂದು ಗಾದೆ ಮಾತು ಬಳಸಿದೆ. ಅದರಿಂದ ಹಲವರ ಭಾವನೆಗಳಿಗೆ ಧಕ್ಕೆ ಉಂಟಾಗಿರುವುದು ಕಂಡು ಬಂದ ತಕ್ಷಣವೇ ನೇರಪ್ರಸಾರದ ವಿಡಿಯೊವನ್ನು ಅಳಿಸಿ ಹಾಕಿದ್ದೇನೆ. ನನ್ನ ಈ ಮಾತಿಗೆ ಕ್ಷಮೆಯಿರಲಿ’ ಎಂದು ಉಪೇಂದ್ರ ತಿಳಿಸಿದ್ದಾರೆ.
ಓದಿ: ಜಾತಿ ನಿಂದನೆ ಆರೋಪ: ನಟ ಉಪೇಂದ್ರ ವಿರುದ್ಧ ಎಫ್‌ಐಆರ್
‘ಬಾಲ್ಯದಲ್ಲಿ ನಾನು ಕಂಡ ಆ ಕ್ರೂರ ಬಡತನ, ನನ್ನ ಕಣ್ಣ ಮುಂದೆಯೇ ಬೆಂಕಿ ಹಚ್ಚಿಕೊಂಡು ಆದ ಆತ್ಮಹತ್ಯೆಗಳು, ಹಸಿವು, ಅಪಮಾನ, ತುಳಿತ …. ಎಲ್ಲವನ್ನೂ ಅನುಭವಿಸಿದ್ದೇನೆ. ಇಂಥ ಪರಿಸರದಲ್ಲಿ ಬೆಳೆದ ನಾನು ಇಂದು ಒಂದು ವರ್ಗದ ಜನರ ಬಗ್ಗೆ ಅವಮಾನಕಾರಿಯಾಗಿ ಮಾತನಾಡುತ್ತೇನೆಯೇ? ನನಗೆ ಹುಚ್ಚೆ? ಅದಕ್ಕೆ ಕಾರಣವಾದರೂ ಏನು? ಅದರಿಂದ ನನಗೆ ಸಿಗುವ ಲಾಭವಾದರೂ ಏನು? ಇಷ್ಟಕ್ಕೂ ಕ್ಷಮೆಯನ್ನು ಸ್ವೀಕರಿಸುವ ದೊಡ್ಡತನವೂ ಇಲ್ಲವೇ? ಯಾಕೆ ಇಷ್ಟೊಂದು ದ್ವೇಷ?’ ಎಂದೂ ಉಪೇಂದ್ರ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.