ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ನಟ ಹಾಗೂ ಸಂಗೀತ ನಿರ್ದೇಶಕ ವಿಜಯ್ ಆಂಟೋನಿ ಪುತ್ರಿ ಮೀರಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೀರಾಗೆ 16 ವರ್ಷ ವಯಸ್ಸಾಗಿತ್ತು.
ಇಲ್ಲಿನ ತಮ್ಮ ನಿವಾಸದ ರೂಮಿನಲ್ಲಿ ಮಂಗಳವಾರ ಬೆಳಗ್ಗೆ ಮೀರಾ ಶವವಾಗಿ ಪತ್ತೆಯಾಗಿದ್ದಾರೆ. ಮೀರಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಖಾಸಗಿ ವಿದ್ಯಾಸಂಸ್ಥೆಯಲ್ಲಿ ಮೀರಾ 12ನೇ ತರಗತಿ ಓದುತ್ತಿದ್ದರು. ಖಿನ್ನತೆಯಿಂದ ಬಳಲುತ್ತಿದ್ದ ಮೀರಾ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಮೀರಾ ಸಂಬಂಧಿಗಳು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.