ಬೆಂಗಳೂರು: ದಕ್ಷಿಣ ಭಾರತದ ಲೇಡಿ ಸೂಪರ್ ಸ್ಟಾರ್ ಎಂದೇ ಖ್ಯಾತಿ ಗಳಿಸಿರುವ ನಟಿ ನಯನತಾರಾ ಅವರು ಇದೇ ಮೊದಲ ಬಾರಿಗೆ ತಮ್ಮ ಅವಳಿ ಮಕ್ಕಳ ಮುಖವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ರಿವೀಲ್ ಮಾಡಿದ್ದಾರೆ.
ಸಾರ್ವಜನಿಕವಾಗಿ ಮಕ್ಕಳೊಂದಿಗೆ ಕಾಣಿಸಿಕೊಳ್ಳುತ್ತಿದ್ದ ನಯನತಾರಾ ಹಾಗೂ ವಿಘ್ನೇಶ್ ಶಿವನ್ ದಂಪತಿ ತಮ್ಮ ಅವಳಿ ಮಕ್ಕಳಾದ ಉಯಿರ್ ಮತ್ತು ಉಲಗಂ ಮುಖವನ್ನು ಮರೆಮಾಚುತ್ತಿದ್ದರು. ಆದರೆ ಇದೀಗ ತಾವು ಅಭಿನಯಿಸಿರುವ 'ಜವಾನ್' ಚಿತ್ರ ಬಿಡುಗಡೆಗೂ ಮುನ್ನ ಜೈಲರ್ ಸಿನಿಮಾದ ಹಾಡಿನೊಂದಿಗೆ ಇಬ್ಬರು ಮಕ್ಕಳ ಮುಖವನ್ನು ರಿವೀಲ್ ಮಾಡಿದ್ದಾರೆ.
ಇನ್‌ಸ್ಟಾಗ್ರಾಮ್‌ನಲ್ಲಿ ಮಕ್ಕಳೊಂದಿನ ವಿಡಿಯೊ ಪೋಸ್ಟರ್ ಹಂಚಿಕೊಂಡಿರುವ ನಯನತಾರಾ, ಇದು ಜವಾನ್ ಚಿತ್ರದ ಸ್ಟೈಲ್!. ನಾವು ಬಂದಿದ್ದೇವೆ ಎಂದು ಬರೆದುಕೊಂಡಿದ್ದಾರೆ.
ಈ ಪೋಸ್ಟರ್‌ಗೆ ಪತಿ ಹಾಗೂ ನಿರ್ದೇಶಕ ವಿಘ್ನೇಶ್ ಶಿವನ್ ಇಮೋಜಿಗಳ ಮೂಲಕ ಪ್ರತಿಕ್ರಿಯಿಸಿದ್ದಾರೆ.
ಜವಾನ್ ಚಿತ್ರದಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಜತೆ ನಯನತಾರಾ ಕಾಣಿಸಿಕೊಳ್ಳುತ್ತಿದ್ದು, ಈ ಚಿತ್ರ ಇದೇ ಸೆಪ್ಟೆಂಬರ್ 7ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.