ಬೆಂಗಳೂರು: ಸಾಮಾಜಿಕ ಜಾಲಾತಾಣಗಳಲ್ಲಿ ಸಕ್ರಿಯರಾಗಿರುವ ನಟಿ ರಶ್ಮಿಕಾ ಮಂದಣ್ಣ ಇತ್ತೀಚೆಗೆ ಯಾವುದೇ ಪೋಸ್ಟ್‌ಗಳನ್ನು ಹಂಚಿಕೊಂಡಿರಲಿಲ್ಲ. ಇದೀಗ ಹಲವು ದಿನಗಳ ಬಳಿಕ ಪೋಟೊವೊಂದನ್ನು ಶೇರ್ ಮಾಡಿಕೊಂಡು ‘ಸಣ್ಣ ಅಪಘಾತವಾಗಿದೆ’ ಎಂದು ಹೇಳಿಕೊಂಡಿದ್ದಾರೆ.
‘ನಿಮ್ಮೆದರು ಕಾಣಿಸಿಕೊಳ್ಳದೆ ಹಲವು ದಿನಗಳಾಗಿವೆ ಎಂದು ತಿಳಿದಿದೆ. ನನಗೆ ಸಣ್ಣ ಅಪಘಾತ ಸಂಭವಿಸಿದೆ. ಈಗ ಚೇತರಿಸಿಕೊಂಡಿದ್ದೇನೆ. ವೈದ್ಯರು ಹೇಳಿದಂತೆ ಮನೆಯಲ್ಲೇ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದೇನೆ. ತಲೆ ಎತ್ತಲು ಹಾಗೂ ಚಟುವಟಿಕೆಯಿಂದಿರಲು ಸಾಧ್ಯವಾಗುತ್ತಿದೆ. ನಿಮ್ಮ ಬಗ್ಗೆ ಕಾಳಜಿವಹಿಸಲು ಆದ್ಯತೆ ನೀಡಿ. ಏಕೆಂದರೆ ಜೀವನ ಚಿಕ್ಕದಾಗಿದೆ. ನಮಗೆ ನಾಳೆ ಎನ್ನುವುದು ಇದೆಯೋ ಇಲ್ಲವೋ ಎನ್ನುವುದು ತಿಳಿದಿಲ್ಲ. ಹೀಗಾಗಿ ಪ್ರತಿದಿನ ಸಂತೋಷದಿಂದಿರಿ’ ಎಂದು ಬರೆದುಕೊಂಡಿದ್ದಾರೆ.
ರಶ್ಮಿಕಾ ಪೋಸ್ಟ್ ಹಂಚಿಕೊಳ್ಳುತ್ತಿದ್ದಂತೆ ಅಭಿಮಾನಿಗಳು ಬೇಗನೆ ಚೇತರಿಸಿಕೊಳ್ಳುವಂತೆ ಹಾರೈಸಿದ್ದಾರೆ.
ರಣಬೀರ್ ಕಪೂರ್ ಜತೆ ನಟಿಸಿದ ‘ಆನಿಮಲ್’ ಚಿತ್ರದಲ್ಲಿ ಕಾಣಿಸಿಕೊಂಡ ಬಳಿಕ ರಶ್ಮಿಕಾ ಅವರ ಯಾವ ಸಿನಿಮಾಗಳು ಬಿಡುಗಡೆಗೊಂಡಿಲ್ಲ. ಪುಷ್ಪ–2 ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿರುವ ಬಗ್ಗೆ ಹೇಳಿದ್ದರೂ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಿಕೆಯಾಗುತ್ತಲೇ ಇದೆ. ಹೀಗಾಗಿ ರಶ್ಮಿಕಾ ಅಭಿಮಾನಿಗಳು ಅವರನ್ನು ಮತ್ತೆ ಪರದೆಯ ಮೇಲೆ ಕಾಣಲು ಕಾತುರರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.