ಬೆಂಗಳೂರು: ಕ್ರೀಮ್ ಚಿತ್ರದ ಹೊಡೆದಾಟದ ದೃಶ್ಯವೊಂದರ ಚಿತ್ರೀಕರಣದ ವೇಳೆ ನಾಯಕಿ ಸಂಯುಕ್ತ ಹೆಗ್ಡೆಗೆ ಗಾಯವಾಗಿದ್ದು ಚಿಕಿತ್ಸೆ ನೀಡಲಾಗಿದೆ. ಚಿತ್ರೀಕರಣ ಮುಂದೂಡಲಾಗಿದೆ.
ಅಭಿಷೇಕ್ ಬಸಂತ್ ನಿರ್ದೇಶನದಲ್ಲಿ ಫೈಟ್ ಮಾಸ್ಟರ್ ಪ್ರಭು ಅವರ ಸಮ್ಮುಖದಲ್ಲಿ ಈ ದೃಶ್ಯದ ಚಿತ್ರೀಕರಣ ನಡೆಯುತ್ತಿತ್ತು. ಛಾಯಾಗ್ರಾಹಕ ಸುನೋಜ್ ವೇಲಾಯುಧನ್ ಅವರು ಡ್ಯೂಪ್ ಬಳಸುವಂತೆ ಸಲಹೆ ನೀಡಿದ್ದರು. ಅದಕ್ಕೆ ಕೆಲವರು ಒಪ್ಪಿರಲಿಲ್ಲ ಎನ್ನಲಾಗಿದೆ.
ಸಂಯುಕ್ತ ಅವರ ಕಾಲು ಹಾಗೂ ತಲೆಗೆ ಬಲವಾದ ಪೆಟ್ಟು ಬಿದ್ದಿದೆ.ಕ್ರೀಮ್ ಚಿತ್ರಕ್ಕೆ ಡಿ.ಕೆ.ದೇವೇಂದ್ರ ಅವರು ನಿರ್ಮಾಪಕರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.