ADVERTISEMENT

ಹೆಣ್ಣು ಮಕ್ಕಳ ಮೇಲಿನ ದೈಹಿಕ, ಮಾನಸಿಕ ಅತ್ಯಾಚಾರಕ್ಕೆ ಕೊನೆ ಯಾವಾಗ?: ಶ್ರುತಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಆಗಸ್ಟ್ 2021, 11:52 IST
Last Updated 27 ಆಗಸ್ಟ್ 2021, 11:52 IST
ನಟಿ ಶ್ರುತಿ
ನಟಿ ಶ್ರುತಿ   

ಬೆಂಗಳೂರು: ಮೈಸೂರಿನಲ್ಲಿ ನಡೆದಿರುವ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣವನ್ನು ಖಂಡಿಸಿರುವ ನಟಿ ಶ್ರುತಿ, ‘ಹೆಣ್ಣು ಮಕ್ಕಳ ಮೇಲಿನ ದೈಹಿಕ, ಮಾನಸಿಕ ಅತ್ಯಾಚಾರಕ್ಕೆ ಕೊನೆ ಯಾವಾಗ’ ಎಂದು ಪ್ರಶ್ನಿಸಿದ್ದಾರೆ.

ಈ ಕುರಿತು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ‘ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ದೈಹಿಕ ಹಾಗೂ ಮಾನಸಿಕ ಅತ್ಯಾಚಾರಕ್ಕೆ ಕೊನೆ ಯಾವಾಗ? ಇಂತಹ ಪುರುಷರ ಮನಸ್ಥಿತಿ ಬದಲಾಗುವುದು ಯಾವಾಗ? ಕಾಮುಕರನ್ನ ಬಂಧಿಸುವ ಕಾನೂನು ಮತ್ತಷ್ಟು ಗಟ್ಟಿಯಾಬೇಕು. ಇಂತಹ ಪುರುಷರು ಬೆಳೆಯುವ ಮನೆಯ ವಾತಾವರಣ, ಸಂಸ್ಕಾರ ಪೋಷಕರ ಜವಾಬ್ದಾರಿಯೂ ಆಗಿರುತ್ತದೆ. ಹುಟ್ಟಿನಿಂದ ಸಾವಿನವರೆಗೆ ಹೆಣ್ಣು ಮಕ್ಕಳು ಅನುಭವಿಸುವ ಕಷ್ಟ ನೂರಾರು ಆಗಿದೆ. ಹಲವಾರು ಮಹಿಳೆಯರು ಅದನ್ನು ಹಿಮ್ಮೆಟ್ಟಿ ಇಡೀ ಭಾರತವೇ ಮೆಚ್ಚುವಂತಹ ಸಾಧನೆಯನ್ನು ಮಾಡುತ್ತಿದ್ದಾರೆ. ಸಾಮೂಹಿಕ ಅತ್ಯಾಚಾರದ ಘಟನೆಗಳು ಮಹಿಳೆಯ ಮಾನಸಿಕ ಸ್ಥೈರ್ಯವನ್ನು ಕುಗ್ಗಿಸುವಂತಾಗುತ್ತದೆ ಇದು ಆಗದಿರಲಿ ಎಂದು ಬರೆದುಕೊಂಡಿದ್ದಾರೆ.

ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಲಲಿತಾದ್ರಿಪುರದ ಗುಡ್ಡದಲ್ಲಿ ಇತ್ತೀಚಿಗೆ ಕಾಲೇಜು ವಿದ್ಯಾರ್ಥಿನಿಯೊಬ್ಬರ ಮೇಲೆ ಐದು ಮಂದಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

ADVERTISEMENT

ಆಕೆಯೊಂದಿಗೆ ಇದ್ದ ಸ್ನೇಹಿತನ ಮೇಲೆ ಗಂಭೀರ ಹಲ್ಲೆ ನಡೆಸಲಾಗಿದೆ. ಹೀಗಾಗಿ ಇಬ್ಬರೂ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಲನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.