ಬೆಂಗಳೂರು: ಕನ್ನಡದ ಖ್ಯಾತ ನಟಿ ಅದಿತಿ ಪ್ರಭುದೇವ ಅವರು ಯುಗಾದಿ ದಿನದಂದೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸುದ್ದಿಯನ್ನು ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಮಗುವಿನ ಕೈಯನ್ನು ತಾವು ಹಾಗೂ ತಮ್ಮ ಪತಿ ಯಶಸ್ ಪಟ್ಲ ಹಿಡಿದುಕೊಂಡಿರುವ ಚಿತ್ರವನ್ನು ಹಂಚಿಕೊಂಡಿದ್ದಾರೆ. ನಮ್ಮನೆ ಮಹಾಲಕ್ಷ್ಮಿ.. ಎಲ್ಲರಿಗೂ ಯುಗಾದಿ ಹಬ್ಬದ ಶುಭಾಶಯಗಳು ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
ಕಮೆಂಟ್ ಬಾಕ್ಸ್‌ನಲ್ಲಿ ಅಭಿಮಾನಿಳಿಂದ ಹಾರೈಕೆಯ ಮಹಾಪೂರವೇ ಹರದುಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.