ನವದೆಹಲಿ: ಪನಾಮಾ ಪೇಪರ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಅವರುದೆಹಲಿಯ ಜಾರಿ ನಿರ್ದೇಶನಾಲಯ ಕಚೇರಿಯಲ್ಲಿ ಸೋಮವಾರ ವಿಚಾರಣೆಗೆ ಹಾಜರಾದರು ಎಂದು ಸುದ್ದಿಸಂಸ್ಥೆ ‘ಪಿಟಿಐ‘ ವರದಿ ಮಾಡಿದೆ
ಐಶ್ವರ್ಯಾ ರೈ ಅವರಿಗೆ ಈಗಾಗಲೇ ಎರಡು ಬಾರಿ ಸಮನ್ಸ್ ನೀಡಲಾಗಿತ್ತು. ಆದರೆ, ಅವರು ತನಿಖೆಗೆ ಹಾಜರಾಗದ ಹಿನ್ನೆಲೆಯಲ್ಲಿ ಮೂರನೇ ಬಾರಿ ಸಮನ್ಸ್ ಜಾರಿ ಮಾಡಲಾಗಿತ್ತು.
‘ಪನಾಮಾ ಪೇಪರ್ಸ್’ ಬಹಿರಂಗಪಡಿಸಿದ ಪಟ್ಟಿಯಲ್ಲಿ ಅಮಿತಾಭ್, ಐಶ್ವರ್ಯ ಸೇರಿದಂತೆ 500 ಭಾರತೀಯರ ಹೆಸರುಗಳಿವೆ.
ಇದಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ ಐಶ್ವರ್ಯ ಅವರು, ‘ಪನಾಮಾ ಪಟ್ಟಿಯಲ್ಲಿ ತಮ್ಮ ಹಾಗೂ ಕುಟುಂಬದ ಸದಸ್ಯರ ಹೆಸರು ಇರುವುದನ್ನು ಸಂಪೂರ್ಣ ಸುಳ್ಳು’ ಎಂದು ತಿಳಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.