ಚೆನ್ನೈ: ಟಾಲಿವುಡ್ನ ಸ್ಟೆಲೀಶ್ ಸ್ಟಾರ್, 'ಪುಷ್ಪಾ' ಖ್ಯಾತಿಯ ನಟ ಅಲ್ಲು ಅರ್ಜುನ್, ವಿಶ್ವ ಪರಿಸರ ದಿನದ ಅಂಗವಾಗಿ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಸಂದೇಶವನ್ನು ಹಂಚಿಕೊಳ್ಳುವ ಮೂಲಕ ಪರಿಸರ ಪ್ರೇಮವನ್ನು ವ್ಯಕ್ತಪಡಿಸಿದ್ದಾರೆ.
ಅಲ್ಲು ಅರ್ಜುನ್ ತಮ್ಮ ಅಭಿಮಾನಿಗಳು ಮತ್ತು ಹಿತೈಷಿಗಳಿಂದ ವಿವಿಧ ರೀತಿಯ ಸಸಿಗಳನ್ನು ಸ್ವೀಕರಿಸುವುದು ಹಾಗೂ ಸಮಾರಂಭದಲ್ಲಿ ಉಡುಗೊರೆಯಾಗಿ ನೀಡುವುದನ್ನು ಅಭ್ಯಾಸ ಮಾಡಿಕೊಂಡಿದ್ದಾರೆ.
ನಟ ಅಲ್ಲು ಅರ್ಜುನ್ ಪರಿಸರವನ್ನು ಗೌರವಿಸುವ, ಪರಿಸರ ಸಂರಕ್ಷಿಸುವ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ನಿರಂತರವಾಗಿ ಮಾಡುತ್ತಿದ್ದಾರೆ.
‘ಜೂನ್ 5‘ ವಿಶ್ವ ಪರಿಸರ ದಿನದ ಅಂಗವಾಗಿ ಅಲ್ಲು ಅರ್ಜುನ್ ಪೋಸ್ಟ್ ಒಂದನ್ನು ಹಂಚಿಕೊಂಡು, ಎಲ್ಲರಿಗೂ ‘ವಿಶ್ವ ಪರಿಸರ ದಿನದ ಶುಭಾಶಯಗಳು‘ ಹಾಗೂ ಎಲ್ಲರೂ ಪರಿಸರವನ್ನು ಸಂರಕ್ಷಿಸುವ ಕೆಲಸ ಮಾಡೋಣ ಎಂದು ಬರೆದುಕೊಂಡಿದ್ದಾರೆ.
ತೆಲಂಗಾಣ ಅರಣ್ಯ ಇಲಾಖೆಯ ಬ್ರಾಂಡ್ ಅಂಬಾಸಿಡರ್ ಆಗಿರುವ ಅಲ್ಲು ಅರ್ಜುನ್, ಜೀವ ವೈವಿಧ್ಯವನ್ನು ಉತ್ತೇಜಿಸುವ ಮತ್ತು ರಕ್ಷಿಸುವ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಚಿತ್ರೀಕರಣದ ವೇಳೆ ಪರಿಸರಕ್ಕೆ ಯಾವುದೇ ಹಾನಿಯಾಗದಂತೆ ನೋಡಿಕೊಳ್ಳಲುವ ಮೂಲಕವೂ ಪರಿಸರ ಕಾಳಜಿ ಹೊಂದಿದ್ದಾರೆ.
ಅಲ್ಲು ಅರ್ಜುನ್ ಮುಂದಿನ 'ಪುಷ್ಪ 2: ದಿ ರೂಲ್' ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಿರ್ಮಾಪಕ ಭೂಷಣ್ ಕುಮಾರ್ ಮತ್ತು ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಅವರ ಹೆಸರಿಡದ ಸಿನಿಮಾದಲ್ಲಿ ನಟ ಅಭಿನಯಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.