ಶಿವ ಕಾರ್ತಿಕೇಯನ್ ಹಾಗೂ ಸಾಯಿ ಪಲ್ಲವಿ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ಅಮರನ್’ ಅ.31ರಂದು ಬಿಡುಗಡೆಯಾಗಲಿದೆ. ಹುತಾತ್ಮ ಮೇಜರ್ ಮುಕುಂದ್ ವರದರಾಜನ್ ಜೀವನ ಚರಿತ್ರೆಯಾಗಿರುವ ಈ ಸಿನಿಮಾ ಕನ್ನಡದಲ್ಲೂ ಡಬ್ ಆಗಿ ಬಿಡುಗಡೆಯಾಗುತ್ತಿದೆ.
ಈಗಾಗಲೇ ಕನ್ನಡದಲ್ಲಿ ಸಿನಿಮಾದ ಟ್ರೇಲರ್ ಬಿಡುಡೆಯಾಗಿದೆ. ಶಿವ ಕಾರ್ತಿಕೇಯನ್ ಮೇಜರ್ ಮುಕುಂದ್ ವರದರಾಜನ್ ಪಾತ್ರದಲ್ಲಿ ಹಾಗೂ ಸಾಯಿ ಪಲ್ಲವಿ ಅವರು ಮುಕುಂದ್ ಪತ್ನಿ ಇಂದೂ ರೆಬೆಕಾ ವರ್ಗೀಸ್ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರವನ್ನು ರಾಜ್ಕುಮಾರ್ ಪೆರಿಯಸಾಮಿ ನಿರ್ದೇಶಿಸಿದ್ದಾರೆ. ಭುವನ್ ಅರೋರಾ, ರಾಹುಲ್ ಬೋಸ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ‘ಇಂಡಿಯಾಸ್ ಮೋಸ್ಟ್ ಫಿಯರ್ಲೆಸ್’ ಪುಸ್ತಕದಲ್ಲಿ ಶಿವ್ ಅರೂರ್ ಮತ್ತು ರಾಹುಲ್ ಸಿಂಗ್ ಅವರು ಮೇಜರ್ ವರದರಾಜನ್ ಬಗ್ಗೆ ಬರೆದಿದ್ದಾರೆ. ಅದರಲ್ಲಿನ ಅಂಶಗಳನ್ನು ತೆಗೆದುಕೊಂಡು ರಾಜ್ಕುಮಾರ್ ಪೆರಿಯಸಾಮಿ ಕಥೆ ಬರೆದಿದ್ದಾರೆ.
ಜಿ.ವಿ.ಪ್ರಕಾಶ್ ಕುಮಾರ್ ಅವರ ಸಂಗೀತ ಸಂಯೋಜನೆ, ಸಿ.ಎಚ್.ಸಾಯಿ ಅವರ ಛಾಯಾಚಿತ್ರಗ್ರಹಣ ಮತ್ತು ಆರ್. ಕಲೈವನನ್ ಅವರ ಸಂಕಲನ ಚಿತ್ರಕ್ಕಿದೆ. ಕಮಲ್ ಹಾಸನ್ ಅವರ ರಾಜ್ಕಮಲ್ ಫಿಲ್ಮ್ಸ್ಇಂಟರ್ನ್ಯಾಷನಲ್, ಸೋನಿ ಪಿಕ್ಚರ್ಸ್ ಜಂಟಿಯಾಗಿ ಈ ಸಿನಿಮಾ ನಿರ್ಮಾಣ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.