ಮುಂಬೈ: ಬಾಲಿವುಡ್ ಹಿರಿಯ ನಟ, ಬಿಗ್ ಬಿ ಖ್ಯಾತಿಯ ನಟ ಅಮಿತಾಭ್ ಬಚ್ಚನ್ ಅನಾರೋಗ್ಯದಿಂದಾಗಿ ಅವರು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
81 ವರ್ಷದ ಅಮಿತಾಭ್‌ಗೆ ಕಾಲಿನ ರಕ್ತನಾಳಗಳಲ್ಲಿ ಸಮಸ್ಯೆ ಇರುವುದರಿಂದ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಗುರುವಾರ ಆಂಜಿಯೋಪ್ಲಾಸ್ಟಿ ಮಾಡಲಾಗಿದ್ದು ಅವರು ಆರೋಗ್ಯವಾಗಿದ್ದಾರೆ ಎಂದು ಅವರ ಆಪ್ತರು ಹೇಳಿದ್ದಾರೆ.
ಈ ಬಗ್ಗೆ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಪ್ರಕಟಿಸಿದ್ದು, ‘ಎಂದೆಂದಿಗೂ ಚಿರಋಣಿ’ ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್‌ಗೆ ಅಭಿಮಾನಿಗಳು ಬೇಗ ಗುಣಮುಖರಾಗಿ ಎಂದು ಹೇಳುತ್ತಿದ್ದಾರೆ.
ಆದರೆ ಈ ಬಗ್ಗೆ ಆಸ್ಪತ್ರೆ ಅಥವಾ ಕುಟುಂಬದವರು ಯಾವುದೇ ಮಾಹಿತಿ ನೀಡಿಲ್ಲ. ಈ ಬಗ್ಗೆ ಹೆಲ್ತ್ ಅಪ್ಡೇಟ್ ನೀಡಬೇಕು ಎಂದು ಅವರ ಅಭಿಮಾನಿಗಳು ಸಾಮಾಜಿಕ ಮಾಧ್ಯಮಗಳ ಮೂಲಕ ಒತ್ತಾಯಿಸಿದ್ದಾರೆ.
ಸಿನಿಮಾ ಕ್ಷೇತ್ರದಲ್ಲಿ ಬೇಡಿಕೆ ಇರಿಸಿಕೊಂಡಿರುವ ಅಮಿತಾಬ್ ಹಲವಾರು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಸದ್ಯ ಅವರು ಪ್ರಭಾಸ್ ನಟನೆಯ ‘ಕಲ್ಕಿ’ಯಲ್ಲಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ರಜನಿಕಾಂತ್ ನಾಯಕ ನಟರಾಗಿರುವ ‘ವೆಟ್ಟೈಯಾನ್’ ಸಿನಿಮಾದಲ್ಲೂ ಅಮಿತಾಭ್ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ನಡೆಯುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.