ಬೆಂಗಳೂರು: ಇಂಗ್ಲೆಂಡ್‌ನಲ್ಲಿ ಭಾರಿ ಮಳೆಯಿಂದಾಗಿ ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯಆರಂಭವು ವಿಳಂಬವಾಗಿದೆ.
ಬಿಡದೆ ಸುರಿಯುತ್ತಿರುವ ಮಳೆಯ ಕುರಿತು ಕ್ರಿಕೆಟ್ ಅಭಿಮಾನಿಗಳು ಖೇದ ವ್ಯಕ್ತಪಡಿಸಿದರೆ, ಟೀಮ್ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಕೂಡ ಬೇಸರ ವ್ಯಕ್ತಪಡಿಸಿದ್ದಾರೆ.
ಅನುಷ್ಕಾ ಶರ್ಮಾ, ಕೊಹ್ಲಿ ಜತೆಗೆ ಇಂಗ್ಲೆಂಡ್‌ಗೆ ತೆರಳಿದ್ದು, ಏಜಿಸ್ ಬೌಲ್ ಸ್ಟೇಡಿಯಂನಲ್ಲಿ ಕ್ವಾರಂಟೈನ್‌ನಲ್ಲಿದ್ದಾರೆ. ಮಳೆಯ ಕುರಿತು ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ನರ್ಸರಿ ಶಾಲೆಯ ರೈನ್ ರೈನ್ ಗೋ ಎವೇ..! ಕಮ್ ಎಗೈನ್ ಆಫ್ಟರ್ 5 ಡೇಯ್ಸ್ ಎಂದು ಸ್ಟೋರೀಸ್‌ನಲ್ಲಿ ಸ್ಟೇಟಸ್ ಪೋಸ್ಟ್ ಮಾಡಿದ್ದಾರೆ.
ಒಂದೆಡೆ ಮಳೆಯಿಂದಾಗಿ ಪಂದ್ಯಕ್ಕೆ ಅಡಚಣೆಯಾದ ಕುರಿತು ಮೀಮ್ಸ್ ಹರಿದಾಡುತ್ತಿದ್ದರೆ, ಮತ್ತೊಂದೆಡೆ ಅನುಷ್ಕಾ ಕೂಡ ಮಳೆ ಹೋಗಲಿ ಎಂದು ಕೇಳಿಕೊಂಡಿದ್ದು, ಕ್ರಿಕೆಟ್ ಪಂದ್ಯ ನಡೆಯಲಿ ಎನ್ನುವುದು ಅಭಿಮಾನಿಗಳ ಹಾರೈಕೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.