ಬೆಂಗಳೂರು: ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರು 36 ನೇ ಜನ್ಮದಿನದ ಸಂಭ್ರಮದಲ್ಲಿದ್ದಾರೆ. ನವೆಂಬರ್ 5ರಂದು ಅವರು ಪತ್ನಿ, ಮಕ್ಕಳೊಡನೆ ಜನ್ಮದಿನ ಆಚರಿಸಿಕೊಂಡಿದ್ದಾರೆ.
ಈ ವೇಳೆ ಇದೇ ಮೊದಲ ಬಾರಿಗೆ ವಿರಾಟ್ ಅವರ ಪತ್ನಿ ಅನುಷ್ಕಾ ಶರ್ಮಾ ಅವರು ಮಗ ಆಕಾಯ್ನ ಫೋಟೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಮಗಳು ವಾಮಿಕಾಳೂ ಆ ಫೋಟೊದಲ್ಲಿ ಕಾಣಿಸಿಕೊಂಡಿದ್ದಾಳೆ.
ವಿರಾಟ್ ಅವರು ತಮ್ಮ ಇಬ್ಬರು ಮಕ್ಕಳನ್ನು ಎತ್ತಿಕೊಂಡು ಆಡುತ್ತಿರುವ ಫೋಟೊ ಇದಾಗಿದ್ದು ಮಗನ ಫೋಟೊವನ್ನು ಇದೇ ಮೊದಲ ಬಾರಿಗೆ ಅನುಷ್ಕಾ ಅವರು ಸಾರ್ವಜನಿಕವಾಗಿ ಹಂಚಿಕೊಂಡಿದ್ದಾರೆ.
ಇದೇ ವರ್ಷ ಫೆಬ್ರುವರಿ 15ರಂದು ಅನುಷ್ಕಾ ಅವರು ಆಕಾಯ್ನಿಗೆ ಜನ್ಮ ನೀಡಿದ್ದರು.
ಇನ್ನು, ಕೊಹ್ಲಿ ಹಾಗೂ ಅನುಷ್ಕಾ ಅವರು ಭಾರತದಲ್ಲಿ ಎಲ್ಲೇ ಹೋದರೂ ಅವರಿಗೆ ಅಭಿಮಾನಿಗಳು ಮುತ್ತಿಕ್ಕಿಕೊಳ್ಳುತ್ತಾರೆ. ಇದರಿಂದ ಅವರು ಖಾಸಗಿ ಜೀವನಕ್ಕೆ ಸಾಕಷ್ಟು ಮುಜುಗರ ಅನುಭವಿಸುತ್ತಿದ್ದಾರೆ ಎಂದು ಅನೇಕ ಸಾರಿ ವರದಿಯಾಗಿದ್ದವು.
ಸದ್ಯದ ಬೆಳವಣಿಗೆ ಎಂದರೆ ಕೊಹ್ಲಿ ದಂಪತಿ ಲಂಡನ್ಗೆ ಮನೆ ಬದಲಾಯಿಸಿದ್ದಾರೆ ಎನ್ನಲಾಗಿದೆ. ಅನುಷ್ಕಾ ಅವರು ಸದ್ಯ ಕೆಲ ವರ್ಷ ಅಲ್ಲಿಯೇ ಇರಲಿದ್ದಾರೆ ಎಂದು ನ್ಯೂಸ್ 18 ವೆಬ್ಸೈಟ್ ವರದಿ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.