ಅರ್ಜೆಂಟೀನಾದ ನಟಿ ಸಿಲ್ವಿನಾ ಲೂನಾ ಅವರು ಪ್ಲಾಸ್ಟಿಕ್ ಸರ್ಜರಿಯಿಂದ ಉಂಟಾದ ಆರೋಗ್ಯ ಸಮಸ್ಯೆಗಳಿಂದಾಗಿ ನಿಧನರಾಗಿದ್ದಾರೆ. ಅವರಿಗೆ 43 ವರ್ಷ ವಯಸ್ಸಾಗಿತ್ತು.
ನಟಿ ಸಿಲ್ವಿನಾ 2010ರಲ್ಲಿ ಮುಖಕ್ಕೆ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದರು. ನಂತರದ ದಿನಗಳಲ್ಲಿ ಅವರು ಮೂತ್ರಪಿಂಡ ವೈಫಲ್ಯ ಹಾಗೂ ಸೇರಿದಂತೆ ಸರ್ಜರಿಯಿಂದ ಉಂಟಾದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು.
ಸಿಲ್ವಿನಾ ನಮ್ಮನ್ನು ಅಗಲಿದ್ದಾರೆ ಎಂದು ಅವರ ಕುಟುಂಬದವರು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.