ಬೆಂಗಳೂರು: ಕೋವಿಡ್ಗೆ ತುತ್ತಾಗಿದ್ದ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕೋವಿಡ್ಗೆ ಒಳಗಾಗಿದ್ದ ಅವರು ಏ. 4ರಂದು ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದರು. ಏ 10ರಂದು ಅವರನ್ನು ಬಿಡುಗಡೆ ಮಾಡಲಾಗಿದೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಇನ್ನು 10 ದಿನ ಅವರು ಮನೆಯಲ್ಲೇ ಪ್ರತ್ಯೇಕ ವಾಸದಲ್ಲಿದ್ದು ವಿಶ್ರಾಂತಿ ಪಡೆಯಲು ಸೂಚಿಸಲಾಗಿದೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.