ವಿಜಯ್ ರಾಘವೇಂದ್ರ ನಟನೆಯ ‘ರಿಪ್ಪನ್ ಸ್ವಾಮಿ’ ಚಿತ್ರಕ್ಕೆ ನಾಯಕಿಯಾಗಿ ಅಶ್ವಿನಿ ಚಂದ್ರಶೇಖರ್ ನಟಿಸಿದ್ದಾರೆ. ಇವರು ಈ ಹಿಂದೆ ‘ಪ್ರೇಮ ಪಲ್ಲಕ್ಕಿ’ ಸೇರಿದಂತೆ ಕೆಲ ಸಿನಿಮಾಗಳಲ್ಲಿ ನಟಿಸಿದ್ದರು.
ಕಿಶೋರ್ ಮೂಡಬಿದರೆ ನಿರ್ದೇಶನದ ಚಿತ್ರ ಪಂಚಾಂನನ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಳ್ಳುತ್ತಿದೆ. ‘ವಿಜಯ್ ರಾಘವೇಂದ್ರ ಪತ್ನಿಯಾಗಿ ಕಾಣಿಸಿಕೊಳ್ಳುತ್ತಿದ್ದೇನೆ. ಚಿತ್ರದ ಒಂದು ಪ್ರಮುಖ ಪಾತ್ರ. ಇದರ ಜೊತೆಗೆ ಕೆಲ ತಮಿಳು, ತೆಲುಗು ಚಿತ್ರಗಳಲ್ಲಿ ಸಕ್ರಿಯವಾಗಿರುವೆ. ತಮಿಳಿನಲ್ಲಿ ನನ್ನ ನಟನೆಯ ಎರಡು ಸಿನಿಮಾಗಳು ಬಿಡುಗಡೆಗೆ ಸಿದ್ಧವಿವೆ. ಮಲಯಾಳಂನಲ್ಲಿ ಎರಡು ಚಿತ್ರಗಳ ಚಿತ್ರೀಕರಣ ಮುಗಿದಿದೆ’ ಎಂದಿದ್ದಾರೆ ಅಶ್ವಿನಿ.
‘ಚಿತ್ರದಲ್ಲಿ ಅಶ್ವಿನಿ ವೈದ್ಯೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ನಾಯಕನಿಗಿರುವಷ್ಟೇ ಮಹತ್ವ ಈ ಪಾತ್ರಕ್ಕಿದೆ. ಸದ್ಯ ಸಿನಿಮಾ ಸೆನ್ಸಾರ್ ಅಂಗಳದಲ್ಲಿದ್ದು, ಶೀಘ್ರವೇ ತೆರೆಗೆ ಬರಲಿದೆ’ ಎಂದಿದೆ ಚಿತ್ರತಂಡ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.