ಕೋಲ್ಕತ್ತ: ಬೆಂಗಾಳಿ ಚಿತ್ರರಂಗದ ಜನಪ್ರಿಯ ನಟಿ ಸ್ವಸ್ತಿಕಾ ಮುಖರ್ಜಿ ಅವರು ತಮ್ಮ ಮುಂದಿನ ’ಶಿಬ್‌ಪುರ್’ ಚಿತ್ರದ ಸಹನಿರ್ಮಾಪಕ ಹಾಗೂ ಆತನ ಸಹವರ್ತಿಗಳು ಇ–ಮೇಲ್‌ಗಳಲ್ಲಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ.
ತಮ್ಮ ಜೊತೆ ಸಹಕರಿಸಬೇಕು ಎಂದು ಒತ್ತಾಯಿಸಿ ಮೇಲ್‌ನಲ್ಲಿ ಬೆದರಿಕೆಯನ್ನು ಹಾಕಿದ್ದಾರೆ ಎಂದಾಗಿ ಸ್ವಸ್ತಿಕಾ ಅವರು ದೂರಿನಲ್ಲಿ ಉಲ್ಲೇಖಿಸಿರುವುದಾಗಿ ಪೊಲೀಸ್ ಅಧಿಕಾರಿ ತಿಳಿಸಿದರು.
ಇಲ್ಲಿನ ಗಾಲ್ಫ್ ಗ್ರೀನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸಹಕರಿಸದಿದ್ದರೆ ನಿಮ್ಮ ಬೆತ್ತಲೆ ಚಿತ್ರ ಹಾಗೂ ವಿಡಿಯೊಗಳನ್ನು ಪೋರ್ನ್ ವೆಬ್‌ಸೈಟುಗಳಲ್ಲಿ ಅಪ್‌ಲೋಡ್ ಮಾಡಲಾಗುವುದು ಎಂದು ಸಹನಿರ್ಮಾಪಕ ಹೇಳಿದ್ದಾಗಿ ಸ್ವಸ್ತಿಕಾ ಆರೋಪಿಸಿದ್ದಾರೆ ಎಂದು ಅಧಿಕಾರಿ ಹೇಳಿದರು.
ಆರೋಪಿ ಸಹನಿರ್ಮಾಪಕ ಅಮೆರಿಕ ಮೂಲದವರಾಗಿದ್ದು, ಆತನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.