ಬೆಂಗಳೂರು: 15ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನ ಚಿತ್ರೋತ್ಸವದ ‘ಜೀವಮಾನ ಸಾಧನೆ’ ಪ್ರಶಸ್ತಿಗೆ ಅಂತರರಾಷ್ಟ್ರೀಯ ಖ್ಯಾತಿಯ ಹಿರಿಯ ನಿರ್ದೇಶಕ ಎಂ.ಎಸ್. ಸತ್ಯು ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿದೆ.
15ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಆಯ್ಕೆ ಸಮಿತಿ ಶಿಫಾರಸು ಮಾಡಿದ್ದ, ಚಿತ್ರರಂಗದಲ್ಲಿ ಗಣನೀಯ ಸೇವೆ ಸಲ್ಲಿಸಿದ ಮೂರು ಮಂದಿಯ ಹೆಸರುಗಳ ಪೈಕಿ ಎಂ.ಎಸ್. ಸತ್ಯು ಅವರನ್ನು ಆಯ್ಕೆ ಮಾಡಲಾಗಿದೆ.
ನಗರದಲ್ಲಿ ಫೆ. 29ರಿಂದ 15ನೇ ಅಂತರರಾಷ್ಟ್ರೀಯ ಚಲನ ಚಿತ್ರೋತ್ಸವ ನಡೆಯುತ್ತಿದ್ದು, ಕೊನೆಯ ದಿನವಾದ ಮಾರ್ಚ್ 7ರಂದು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.