ADVERTISEMENT

ಭೈರತಿ ರಣಗಲ್ ಎರಡನೇ ಟೀಸರ್ ಅನಾವರಣ: ಹೆಚ್ಚಿದ ನಿರೀಕ್ಷೆ

ನಟ ಶಿವರಾಜ್‌ಕುಮಾರ್ ಅಭಿನಯದ ‘ಭೈರತಿ ರಣಗಲ್’ ಬಿಡುಗಡೆಗೆ ಸಿದ್ದ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2024, 12:53 IST
Last Updated 26 ಅಕ್ಟೋಬರ್ 2024, 12:53 IST
<div class="paragraphs"><p>Bhairathi Ranagal</p></div>

Bhairathi Ranagal

   

ಬೆಂಗಳೂರು: ನಟ ಶಿವರಾಜ್‌ಕುಮಾರ್ ಅಭಿನಯದ ‘ಭೈರತಿ ರಣಗಲ್’ ಬಿಡುಗಡೆಗೆ ಸಿದ್ದವಾಗಿರುವ ಹೊತ್ತಿನಲ್ಲಿ ಚಿತ್ರದ ಮೊತ್ತೊಂದು ಟೀಸರ್ ಅನಾವರಣವಾಗಿದ್ದು ಸಿನಿ ಪ್ರಿಯರಲ್ಲಿ ಕುತೂಹಲ ಮೂಡುವಂತೆ ಮಾಡಿದೆ.

ಯಶಸ್ವಿಯಾಗಿದ್ದ ‘ಮಪ್ತಿ’ ಪ್ರಿಕ್ವೆಲ್ ಸಿನಿಮಾ ಎಂದು ಹೇಳಲಾದ ಈ ‘ಭೈರತಿ ರಣಗಲ್’ ಚಿತ್ರಮಂದಿರಗಳಲ್ಲಿ ಇದೇ 15 ರಂದು ಬಿಡುಗಡೆಯಾಗಲಿದೆ.

ADVERTISEMENT

ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜ್‌ಕುಮಾರ್ ಅವರು ನಿರ್ಮಿಸುತ್ತಿರುವ ಚಿತ್ರಕ್ಕೆ ನರ್ತನ್ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ.

ರುಕ್ಮಿಣಿ ವಸಂತ್‍, ರಾಹುಲ್ ಬೋಸ್‍, ಅವಿನಾಶ್‍ , ದೇವರಾಜ್‍, ಮಧು ಗುರುಸ್ವಾಮಿ, ಛಾಯಾ ಸಿಂಗ್‍, ಬಾಬು ಹಿರಣ್ಣಯ್ಯ ಮುಂತಾದವರು ಅಭಿನಯಿಸುತ್ತಿದ್ದಾರೆ. ಚಿತ್ರಕ್ಕೆ ನವೀನ್ ಕುಮಾರ್ ಛಾಯಾಚಿತ್ರಗ್ರಹಣ ಮತ್ತು ರವಿ ಬಸ್ರೂರು ಅವರ ಸಂಗೀತವಿದೆ.

‘ಭೈರತಿ ರಣಗಲ್‍’ ಆರು ವರ್ಷಗಳ ಹಿಂದೆ ಬಿಡುಗಡೆಯಾದ ‘ಮಫ್ತಿ’ ಚಿತ್ರದ ಪ್ರೀಕ್ವೆಲ್‍. ಅಲ್ಲಿದ್ದ ಭೈರತಿ ರಣಗಲ್‍ನ ಸಣ್ಣ ಕಥೆಯನ್ನು ನಿರ್ದೇಶಕರು ಇಲ್ಲಿ ಬೆಳೆಸಿದ್ದಾರೆ. ಯಾಕೆ ಅವನು ಭೈರತಿ ರಣಗಲ್‍ ಆಗುತ್ತಾನೆ? ಜನರಿಗೆ ಯಾಕೆ ಅವನನ್ನು ಕಂಡರೆ ಅಷ್ಟು ಪ್ರೀತಿ ಎಂಬುದನ್ನು ಇಲ್ಲಿ ಹೇಳಲಾಗಿದೆ.

ಅಂದಹಾಗೆ ಗೀತಾ ಫಿಕ್ಚರ್ಸ್ ಸಂಸ್ಥೆಯ ಎರಡನೇ ಸಿನಿಮಾ ಬೈರತಿ ರಣಗಲ್ ಅಗಿದ್ದು, ನಿರೀಕ್ಷೆ ಹೆಚ್ಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.