ಮುಂಬೈ:ತಮ್ಮ ವಿರುದ್ಧ ಖ್ಯಾತ ಲೇಖಕ ಮತ್ತು ಗೀತೆ ರಚನೆಕಾರ ಜಾವೇದ್ ಅಖ್ತರ್ ಅವರು ದಾಖಲಿಸಿರುವಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರಾಗುವುದರಿಂದ ಶಾಶ್ವತ ವಿನಾಯಿತಿ ನೀಡುವಂತೆ ಕೋರಿಬಾಲಿವುಡ್ ನಟಿ ಕಂಗನಾ ರನೌತ್ ಮೇಲ್ಮನವಿ ಸಲ್ಲಿಸಿದ್ದಾರೆ.
ವಕೀಲ ರಿಜ್ವಾನ್ ಸಿದ್ದಿಕಿ ಮೂಲಕ ಸಲ್ಲಿಸಿರುವ ಮನವಿಯಲ್ಲಿ, ತಾವು ತಮ್ಮ ವೃತ್ತಿಯ ಹೊಣೆಗಾರಿಕೆಯಿಂದಾಗಿ ದೇಶದ ಹಲವು ಭಾಗಗಳಿಗೆ ಮತ್ತು ವಿದೇಶಗಳಿಗೂ ಪ್ರಯಾಣಿಸುವ ಅಗತ್ಯವಿದೆ. ಹೀಗಾಗಿ ನ್ಯಾಯಾಲಯಕ್ಕೆ ಹಾಜರಾಗುವುದರಿಂದ ಶಾಶ್ವತ ವಿನಾಯಿತಿನೀಡಬೇಕು. ಮಾತ್ರವಲ್ಲದೆ, ನಿಯಮಿತವಾಗಿ ನ್ಯಾಯಾಲಯಕ್ಕೆ ಹಾಜರಾಗಬೇಕಾದರೆಮುಂಬೈನಿಂದ ತಮ್ಮ ಕಾರ್ಯಸ್ಥಳಗಳಿಗೆ ದೂರದ ಪ್ರಯಾಣ ಮಾಡಬೇಕಾಗುತ್ತದೆ. ಇದರಿಂದ ತಮಗೆ ಅನಗತ್ಯ ತೊಂದರೆಯಾಗುತ್ತದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಮಾನಹಾನಿ ಪ್ರಕರಣ: ನಟಿ ಕಂಗನಾಗೆ ನೋಟಿಸ್
ಮುಂದುವರಿದು,ನ್ಯಾಯಾಲಯಕ್ಕೆ ನಿರಂತರವಾಗಿ ಹಾಜರಾಗುವುದರಿಂದ ತಮಗಷ್ಟೇ ಅಲ್ಲದೆ, ನಿರ್ಮಾಣ ಸಂಸ್ಥೆಗಳಿಗೂ ಭಾರಿ ಪ್ರಮಾಣದ ನಷ್ಟ ಉಂಟಾಗುತ್ತದೆ ಎಂದೂ ಉಲ್ಲೇಖಿಸಿದ್ದಾರೆ.
ಈ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯವು ಜುಲೈ27ಕ್ಕೆ ಮುಂದೂಡಿದೆ.
ಇದನ್ನೂ ಓದಿ:ಮಾನಹಾನಿ ಪ್ರಕರಣ: ಕಂಗನಾ ರನೌತ್ಗೆ ಸಮನ್ಸ್ ಜಾರಿ
ನಟಿ ಕಂಗನಾ ಅವರು ಟಿವಿ ಸಂದರ್ಶನಗಳಲ್ಲಿ ತಮ್ಮ ವಿರುದ್ಧ ಆಧಾರರಹಿತವಾಗಿಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ. ಇದರಿಂದ ತಮ್ಮ ಘನತೆಗೆ ಧಕ್ಕೆಯಾಗಿದೆ ಎಂದು ಆರೋಪಿಸಿ 76 ವರ್ಷದ ಅಖ್ತರ್ ಅವರು ಕಳೆದ ನವೆಂಬರ್‌ನಲ್ಲಿ ಅಂಧೇರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದರು.
ಕಳೆದ ವರ್ಷ ಅನುಮಾನಾಸ್ಪದವಾಗಿ ಸಾವಿಗೀಡಾದ ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲಿ ಅನಗತ್ಯವಾಗಿನನ್ನ ಹೆಸರನ್ನು ಎಳೆದು ತಂದಿದ್ದಾರೆ.ಜೊತೆಗೆಹೃತಿಕ ರೋಷನ್‌ಜೊತೆಗಿನಸಂಬಂಧದ ಬಗ್ಗೆ ಮೌನವಾಗಿರುವಂತೆನಾನು ಬೆದರಿಕೆ ಹಾಕಿರುವುದಾಗಿ ಸುಳ್ಳು ಆರೋಪ ಮಾಡಿದ್ದಾರೆ. ಇದರಿಂದ ಸಾರ್ವಜನಿಕ ಜೀವನದಲ್ಲಿನ ನನ್ನ ಗೌರವಕ್ಕೆ ಚ್ಯುತಿ ಬಂದಿದೆ ಎಂದು ಅಖ್ತರ್ ದೂರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.