ಮುಂಬೈ: ಮಹಾರಾಷ್ಟ್ರದ ಔರಂಗಾಬಾದ್ನಲ್ಲಿರುವ ಗೃಷ್ಣೇಶ್ವರ ಜ್ಯೋತಿರ್ಲಿಂಗಕ್ಕೆ ಮಂಗಳವಾರ ಭೇಟಿ ನೀಡಿದ ನಟ ಸೈಫ್ ಅಲಿ ಖಾನ್ ಪುತ್ರಿ ಸಾರಾ ಅಲಿ ಖಾನ್, ವಿಶೇಷ ಪೂಜೆ ಸಲ್ಲಿಸಿದ್ದಾರೆ.
ದೇಗುಲಕ್ಕೆ ಭೇಟಿ ನೀಡಿದ ಚಿತ್ರಗಳನ್ನು ಸಾರಾ ಅಲಿ ಖಾನ್ ತಮ್ಮ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ.
‘ಜೈ ಬೋಲೇನಾಥ್’ ಎಂದು ಬರೆದುಕೊಂಡಿರುವ ಸಾರಾ, ದೇಗುಲದಲ್ಲಿ ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ್ದು ಹಾಗೂ ನಂದಿಯ ಕಿವಿಯಲ್ಲಿ ಪ್ರಾರ್ಥನೆ ಹೇಳುತ್ತಿರುವ ಚಿತ್ರಗಳು ಇವೆ.
ಸಾರಾ ಅವರು ಸದ್ಯ ಅನುರಾಗ್ ಬಸು ಅವರ ‘ಮೆಟ್ರೊ ಇನ್ ಡಿನೊ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಆದಿತ್ಯ ರಾಯ್ ಕಪೂರ್, ಕೊಂಕನ್ ಸೇನ್ ಶರ್ಮಾ, ಪಂಕಜ್ ತ್ರಿಪಾಠಿ, ಫಾತಿಮಾ ಸನಾ ಶೇಖ್, ಅನುಪಮ್ ಖೇರ್, ಅಲಿ ಫಝಲ್ ಹಾಗೂ ನೀನಾ ಗುಪ್ತಾ ಮುಖ್ಯ ಪಾತ್ರದಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.