ಬೆಂಗಳೂರು: ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ನಟಿ, ನಿರ್ದೇಶಕಿ, ಕವಯತ್ರಿ ಲೀನಾ ಮಣಿಮೇಕಲೈ ವಿರುದ್ಧ ದೆಹಲಿಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ದೆಹಲಿಯ ಸ್ಥಳೀಯ ವಕೀಲರೊಬ್ಬರು ಲೀನಾ ವಿರುದ್ಧ ದೂರು ದಾಖಲಿಸಿದ್ದಾರೆ.
ಲೀನಾ‘ಕಾಳಿ‘ ಎಂಬ ಸಾಕ್ಷ್ಯಚಿತ್ರ ನಿರ್ಮಾಣ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ಪೋಸ್ಟರ್ ಹಂಚಿಕೊಂಡಿದ್ದು ಅದರಲ್ಲಿ ಹಿಂದೂ ದೇವತೆ ಕಾಳಿ ಮಾತೆಯನ್ನು ಸಿಗರೇಟ್ ಸೇದುತ್ತಿರುವ ಹಾಗೂ ಕೈಯಲ್ಲಿ ಎಲ್‌ಜಿಬಿಟಿಕ್ಯೂ(LGBTQ) ಸಮುದಾಯದ ಧ್ವಜವನ್ನು ಹಿಡಿದಿರುವ ಅವತಾರದಲ್ಲಿ ತೋರಿಸಲಾಗಿದೆ.
ಈ ಪೋಸ್ಟರ್ ಹಾಗೂ ಲೀನಾ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು ಅವರನ್ನು ಕೂಡಲೇ ಬಂಧಿಸಬೇಕು ಎಂದು ನೆಟ್ಟಿಗರು ಆಗ್ರಹಿಸಿದ್ದಾರೆ.
ದೂರು ಕೊಟ್ಟಿರುವ ವಕೀಲರು, ಲೀನಾ ಅವರುಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಅವರನ್ನು ಕೂಡಲೇ ಬಂಧಿಸಬೇಕುಎಂದಿದ್ದಾರೆ. ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ ಕಠಿಣ ಕ್ರಮಕೈಗೊಳ್ಳಬೇಕು ಎಂದು ದೂರಿನಲ್ಲಿ ಹೇಳಿದ್ದಾರೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.
ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.