ಮೈಸೂರು: ಬಿಗ್ ಬಾಸ್ ಖ್ಯಾತಿಯ ಚಂದನ್ ಶೆಟ್ಟಿ-ನಿವೇದಿತಾ ಗೌಡ ಬುಧವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಲ್ಲಿನ ಖಾಸಗಿ ಕಲ್ಯಾಣ ಮಂಟಪದಲ್ಲಿ ಸಾಂಪ್ರದಾಯಿಕವಾಗಿವಿವಾಹ ಜರುಗಿತು.
ಬೆಳಗ್ಗೆ 9 ಗಂಟೆಗೆಮೀನಾ ಲಗ್ನದಲ್ಲಿ ಚಂದನ್‌ಶೆಟ್ಟಿ ನಿವೇದಿತಾಗೆ ಮಾಂಗಲ್ಯಧಾರಣೆ ಮಾಡಿದ್ದಾರೆ. ಈ ವೇಳೆ ಎರಡು ಕುಟುಂಬಗಳ ಹಿರಿಯರು, ಸಂಬಂಧಿಕರು, ಆಪ್ತರು, ಹಿತೈಷಿಗಳು, ಗೆಳೆಯರು ಸೇರಿದಂತೆ ಚಿತ್ರರಂಗದ ಗಣ್ಯರು ಹಾಜರಿದ್ದರು.
ನಿವೇದಿತಾ ಗುಲಾಬಿ ಮತ್ತು ಹಸಿರು ಬಣ್ಣದ ಸೀರೆಯಲ್ಲಿ ಮಿಂಚುತ್ತಿದ್ದರು.ಚಂದನ್ ಶೆಟ್ಟಿ ಬಿಳಿ ಬಣ್ಣದ ಉಡುಪು ತೊಟ್ಟಿದ್ದರು. ಮಂಗಳವಾರ ಸಂಜೆಆರತಕ್ಷತೆ ಕಾರ್ಯಕ್ರಮ ನೇರವೇರಿತ್ತು. ಈ ಸಮಾರಂಭಕ್ಕೆನಟರಾದ ಪುನೀತ್ ರಾಜ್‌ಕುಮಾರ್,ಧ್ರುವ ಸರ್ಜಾ ಸೇರಿದಂತೆ ಚಿತ್ರರಂಗದ ಗಣ್ಯರು ಭಾಗವಹಿಸಿದ್ದರು.
ಯುವ ದಸರಾದ ಸರ್ಕಾರಿ ವೇದಿಕೆಯಲ್ಲಿ ಪರಸ್ಪರ ಪ್ರೀತಿ ಹಂಚಿಕೊಂಡಿದ್ದ ಈ ಜೋಡಿ ವಿವಾದಕ್ಕೀಡಾಗಿತ್ತು. ಬಳಿಕ ಮೈಸೂರಿನಲ್ಲಿ ಅದ್ಧೂರಿಯಾಗಿ ಎಂಗೇಜ್ ಮೆಂಟ್ ಮಾಡಿಕೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.