ರಕ್ಷಿತ್ ಶೆಟ್ಟಿ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘777 ಚಾರ್ಲಿ’ ಜೂನ್ 10ಕ್ಕೆ ಬಿಡುಗಡೆಯಾಗುತ್ತಿದೆ. ಈಗಾಗಲೇ ಉತ್ತರ ಭಾರತದದೆಹಲಿ, ಅಹಮದಾಬಾದ್, ಕೋಲ್ಕತ್ತ ಸೇರಿದಂತೆ ವಿವಿಧ ಕಡೆ ಹಾಗೂ ವಿದೇಶದ ಕೆಲವೆಡೆ ಚಿತ್ರದ ಸೆಲೆಬ್ರಿಟಿ ಶೋಗಳು ನಡೆದಿವೆ. ಜೂನ್ 9ರಂದು ರಾಜ್ಯದೆಲ್ಲೆಡೆ ‘777 ಚಾರ್ಲಿ’ಯ ನೂರಕ್ಕೂ ಅಧಿಕ ಪ್ರೀಮಿಯರ್‌ಪ್ರದರ್ಶನ ನಡೆಯಲಿದೆ.
ಸಿನಿಮಾವೊಂದು ಬಿಡುಗಡೆಗು ಮುನ್ನವೇ ಇಷ್ಟೊಂದು ಪ್ರೀಮಿಯರ್ ಪ್ರದರ್ಶನ ಕಾಣುತ್ತಿರುವುದು ಇದೇ ಮೊದಲಾಗಿದೆ. ಸೋಮವಾರ ಚಿತ್ರದ ಸೆಲೆಬ್ರಿಟಿ ಪ್ರದರ್ಶನ ನಡೆದಿದ್ದು, ನಟಿ ರಮ್ಯ, ನಿರ್ದೇಶಕ ಸಂತೋಷ್ ಆನಂದರಾಮ್ ಸೇರಿದಂತೆ ನೂರಾರು ಸೆಲೆಬ್ರಿಟಿಗಳು ಈಗಾಗಲೇ ಸಿನಿಮಾ ನೋಡಿ ಪ್ರತಿಕ್ರಿಯೆ ನೀಡಿದ್ದಾರೆ.
‘ಕರ್ನಾಟಕದಲ್ಲಿ ಮುನ್ನೂರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ‘777 ಚಾರ್ಲಿ’ ಬಿಡುಗಡೆ ಮಾಡುತ್ತಿದ್ದೇವೆ. ಈ ಚಿತ್ರದ ವಿಶೇಷವೆಂದರೆ ಇದೇ ಮೊದಲ ಬಾರಿಗೆ ಜೂನ್ 9 ರಂದು 100ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಪ್ರೇಕ್ಷಕರಿಗಾಗಿ ಪೂರ್ವಭಾವಿ ಪ್ರದರ್ಶನ ಆಯೋಜಿಸಲಾಗಿದೆ. ಬೆಂಗಳೂರಿನಲ್ಲಿ 55 ಕಡೆ ಪ್ರದರ್ಶನ ನಡೆದರೆ, ಉಳಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಪ್ರದರ್ಶನವಿರಲಿದೆ. ಮಲ್ಟಿಪ್ಲೆಕ್ಸ್ ಹಾಗೂ ಏಕಪರದೆ ಚಿತ್ರಮಂದಿರಗಳಲ್ಲೂ ಪೂರ್ವಭಾವಿ ಪ್ರದರ್ಶನ ನಡೆಯಲಿದೆ’ ಎಂದು ಕೆ.ಆರ್.ಜಿ ಫಿಲಂಸ್‌ನ ಕಾರ್ತಿಕ್ ಗೌಡ ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.