ಹೈದರಾಬಾದ್: ತನ್ನೊಂದಿಗೆ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕಳೆದ ತಿಂಗಳು ಬಂಧನಕ್ಕೆ ಒಳಗಾಗಿದ್ದ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ಗೆ ನಗರದ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಅಕ್ಟೋಬರ್ 6 ರಿಂದ 10ರವರೆಗೆ ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳಲು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಅಕ್ಟೋಬರ್ 10ರಂದು ನ್ಯಾಯಾಲಯದ ಮುಂದೆ ಹಾಜರಾಗುವಂತೆ ಜಾನಿ ಮಾಸ್ಟರ್‌ಗೆ ಸೂಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜಾನಿ ಮಾಸ್ಟರ್ ನಿಜವಾದ ಹೆಸರು ಶೇಕ್ ಜಾನಿ ಬಾಷಾ ಎಂಬುದಾಗಿದ್ದು, ಸೆಪ್ಟೆಂಬರ್ 19ರಂದು ಅವರನ್ನು ಸೈಬರಾಬಾದ್ ಪೊಲೀಸರು ಗೋವಾದಲ್ಲಿ ಬಂಧಿಸಿದ್ದರು. ಬಳಿಕ, ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ ವಾರೆಂಟ್ ಮೇಲೆ ಹೈದರಾಬಾದ್‌ಗೆ ಕರೆತಂದಿದ್ದರು. ಆರೋಪಿ ಜಾನಿ ಮಾಸ್ಟರ್‌ಗೆ ನಗರದ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.