‘ಚೈತ್ರದ ಪ್ರೇಮಾಂಜಲಿ’, ‘ಕರ್ಪೂರದ ಗೊಂಬೆ’, ‘ಲಕ್ಷ್ಮಿ ಮಹಾಲಕ್ಷ್ಮಿ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದ ನಟಿ ಶ್ವೇತಾ ಇಪ್ಪತ್ತು ವರ್ಷಗಳ ನಂತರ ಮತ್ತೆ ಕನ್ನಡ ಚಿತ್ರರಂಗಕ್ಕೆ ಹೆಜ್ಜೆ ಇಟ್ಟಿದ್ದಾರೆ.
ನಟ ಪೃಥ್ವಿ ಅಂಬಾರ್ ನಟನೆಯ ‘ಚೌಕಿದಾರ್’ ಸಿನಿಮಾದಲ್ಲಿ ಶ್ವೇತಾ ನಟಿಸುತ್ತಿದ್ದಾರೆ. ತಮಿಳು ಮತ್ತು ಮಲಯಾಳ ಚಿತ್ರರಂಗದಲ್ಲಿ ವಿನೋದಿನಿ ಎಂದೂ ಖ್ಯಾತಿ ಪಡೆದಿರುವ ಶ್ವೇತಾ ‘ಲಕ್ಷ್ಮಿ ನಿವಾಸ’ ಎಂಬ ಧಾರಾವಾಹಿ ಮೂಲಕ ನಟನೆಗೆ ಮರಳಿದ್ದರು. ಸುಮಾರು 75 ಚಲನಚಿತ್ರಗಳಲ್ಲಿ ನಟಿಸಿರುವ ಶ್ವೇತಾ 2003ರಲ್ಲಿ ತೆರೆಕಂಡ ‘ಕುಟುಂಬ’ ಸಿನಿಮಾ ಬಳಿಕ ಹೊಸ ಪ್ರಾಜೆಕ್ಟ್ಸ್ ಒಪ್ಪಿಕೊಂಡಿರಲಿಲ್ಲ. ಲವ್ ಸ್ಟೋರಿ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಪೃಥ್ವಿ ಅಂಬಾರ್ ‘ಚೌಕಿದಾರ್’ ಮೂಲಕ ರಗಡ್ ಅವತಾರ ತಾಳಿದ್ದಾರೆ. ಚಂದ್ರಶೇಖರ್ ಬಂಡಿಯಪ್ಪ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಧನ್ಯರಾಮ್ ಕುಮಾರ್ ನಾಯಕಿಯಾಗಿ ನಟಿಸಿದ್ದು, ಸಾಯಿ ಕುಮಾರ್ ವಿಶೇಷ ಪಾತ್ರದಲ್ಲಿದ್ದಾರೆ.
ಚಿತ್ರಕ್ಕೆ ಸಚಿನ್ ಬಸ್ರೂರು ಸಂಗೀತ ನಿರ್ದೇಶನ, ಸಿದ್ದು ಕಂಚನಹಳ್ಳಿ ಛಾಯಾಚಿತ್ರಗ್ರಹಣ, ಪ್ರಮೋದ್ ಮರವಂತೆ, ಸಂತೋಷ್ ನಾಯಕ್, ವಿ.ನಾಗೇಂದ್ರ ಪ್ರಸಾದ್ ಗೀತರಚನೆಯಿದೆ. ಬಹು ಭಾಷೆಯಲ್ಲಿ ಈ ಸಿನಿಮಾ ಮೂಡಿಬರುತ್ತಿದ್ದು, ಚಂದ್ರಶೇಖರ್ ತಮ್ಮ ವಿ.ಎಸ್. ಎಂಟರ್‌ಟೈನ್ಮೆಂಟ್ ಮೂಲಕ ನಿರ್ಮಾಣ ಮಾಡುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.